ತೋಟಗಾರಿಕೆ ಇಲಾಖೆ ವತಿಯಿಂದ ಹಣ್ಣು ಮತ್ತು ಜೇನು ಪ್ರದರ್ಶನ ಮತ್ತು ಮಾರಾಟ ಮೇಳ

ಕೊಪ್ಪಳ,  : ಕೊಪ್ಪಳ ತೋಟಗಾರಿಕೆ ಇಲಾಖೆ(ಜಿ.ಪಂ.), ಕರ್ನಾಟಕ ರಾಜ್ಯ ತೋಟಗಾರಿಕೆ ಮಾರಾಟ ಮಹಾ ಮಂಡಳಿ(ನಿ.) ಬೆಂಗಳೂರು ಹಾಗೂ ಜಿಲ್ಲಾ ಹಾಪ್‌ಕಾಮ್ಸ್ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ (ರೈತರಿಂದ ನೇರವಾಗಿ ಗ್ರಾಹಕರಿಗೆ) ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಮೋಸಂಬಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ-2021 ನ್ನು ಮಾರ್ಚ್ 08 ರಿಂದ 11 ರವರೆಗೆ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ  ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಮಾರ್ಚ್ 08 ರಂದು ಬೆಳಿಗ್ಗೆ 10 ಗಂಟೆಗೆ ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನೆ ನೆರವೇರಿಸುವರು. ರಾಜ್ಯ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಆರ್.ಶಂಕರ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ.ರಾಜಶೇಖರ್ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್. ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಬಸವರಾಜ ಪಾಟೀಲ್ ಇಟಗಿ ಹಾಗೂ ಡಾ. ಚಂದ್ರಶೇಖರ್ ಬಿ.ಪಾಟೀಲ್, ಕರ್ನಾಟಕ ತೋಟಗಾರಿಕೆ ಮಹಾಮಂಡಳಿ ಅಧ್ಯಕ್ಷರಾದ ಡಾ. ಬಿ.ಡಿ.ಭೂಕಾಂತ್, ಮುನಿರಾಬಾದ್ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿ.ಹೆಚ್.ಎಮ್., ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ಭೀಮಣ್ಣ ತಳ್ಳಿಕೇರಿ, ಜಿ.ಪಂ. ಉಪಾಧ್ಯಕ್ಷೆ ಬೀನಾ ಗೌಸ್, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್, ಕರ್ನಾಟಕ ತೋಟಗಾರಿಕೆ ಮಹಾಮಂಡಳಿ ನಿರ್ದೇಶಕರಾದ ಶಾಮರಾವ್ ಕುಲಕರ್ಣಿ, ಕೊಪ್ಪಳ ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಯಂಕಣ್ಣ ಯರಾಶಿ, ಜಿಲ್ಲಾ ಕೃಷಿ ಸಮಾಜದ ಅಧ್ಯಕ್ಷರಾದ ಶಿವಣ್ಣ ಮೂಲಿಮನಿ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರಕುಮಾರ ಕಠಾರಿಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ರಶ್ಮಿ ಮಹೇಶ, ಬೆಂಗಳೂರು ಲಾಲ್‌ಬಾಗ್‌ನ ತೋಟಗಾರಿಕೆ ನಿರ್ದೇಶಕರಾದ ಬಿ.ಫೌಜಿಯಾ ತರುನಮ್, ಜಿಲ್ಲಾಧಿಕಾರಿಗಳಾದ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಬೆಂಗಳೂರಿನ ತೋಟಗಾರಿಕೆ ಜಂಟಿ ನಿರ್ದೇಶಕರು ಹಾಗೂ ವ್ಯವಸ್ಥಾಪಕ ನಿರ್ದೇಶಕರು(ಕೆ.ಎಚ್.ಎಫ್) ಹೇಮಾ, ಕಲಬುರಗಿ ವಿಭಾಗದ ವಿಭಾಗೀಯ ತೋಟಗಾರಿಕೆ ಜಂಟಿ ನಿರ್ದೇಶಕರಾದ ಮಂಜುನಾಥ ನಾರಾಯಣಪುರ, ಮುನಿರಾಬಾದ್‌ನ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಪಿ.ಎಮ್.ಗಂಗಾಧರಪ್ಪ, ಕೊಪ್ಪಳ ಕೃಷಿ ವಿಸûರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ. ಎಂ.ಬಿ.ಪಾಟೀಲ್, ಜಿಲ್ಲಾ ವಾರ್ತಾಧಿಕಾರಿ ಜಿ.ಸುರೇಶ್ ಭಾಗವಹಿಸುವರು ಎಂದು ಹಾಪ್‌ಕಾಮ್ಸ್ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾ.ತೋ.ಮಿ) ಬಿ.ಕೆ. ಓಬಣ್ಣ ಹಾಗೂ ತೋಟಗಾರಿಕೆ ಉಪನಿರ್ದೇಶಕರು(ಜಿ.ಪಂ) ಕೃಷ್ಣ ಉಕ್ಕುಂದ   ತಿಳಿಸಿದ್ದಾರೆ.

Please follow and like us:
error