ದತ್ತಿ ಪ್ರಶಸ್ತಿಯು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ-ಮೆಹಬೂಬ ಮಠದ


ಕೊಪ್ಪಳ: ಕನ್ನಡ ಪುಸ್ತಕ ಪ್ರಾಧಿಕಾರದಿಂದ ಧನ ಸಹಾಯ ಪಡೆದ ನನ್ನ ಮೊದಲ ಕೃತಿ ‘ಬಿಸಿಲು ಕಾಡುವ ಪರಿ’ಗೆ ಕನ್ನಡ ಸಾಹಿತ್ಯ ಪರಿಷತ್ತಿನ ೨೦೧೯ನೇ ಸಾಲಿನ ‘ನಾ.ಕು.ಗಣೇಶ ದತ್ತಿ ಪ್ರಶಸ್ತಿ’ ಲಭಿಸಿರುವುದು ಸಂತಸದ ಸಂಗತಿ. ಈ ಪ್ರಶಸ್ತಿಯು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಇದೊಂದು ನನ್ನ ಜೀವನದಲ್ಲಿ ಅವಿಸ್ಮರಣೀಯ ನೆನಪಾಗಿದೆ. ಈ ಪ್ರಶಸ್ತಿಯು ನಾನು ಮುಂದಿನ ದಿನಮಾನಗಳಲ್ಲಿ ಇನ್ನೂ ಸತ್ವಯುತವಾದ ಕವಿತೆಗಳನ್ನು ರಚಿಸಲು ಪ್ರೇರಣೆ ನೀಡಿದೆ. ಇದನ್ನು ನಾನು ನನ್ನ ತಾಯಿಗೆ ಅರ್ಪಿಸುತ್ತೇನೆ. ಕೊಪ್ಪಳ ಜಿಲ್ಲೆಯ ಬರಹಗಾರರನ್ನು, ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತಿರುವ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರಿಗೆ ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಕೊಪ್ಪಳ ತಾಲೂಕಿನ ಚಿಲವಾಡಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಮೆಹಬೂಬ ಮಠದ ಹೇಳಿದರು.

ಅವರು ಶನಿವಾರ ಕೊಪ್ಪಳದ ಅಮೀನಪುರದಲ್ಲಿರುವ ತಮ್ಮ ನಿವಾಸದಲ್ಲಿ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಹಮ್ಮಿಕೊಂಡ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ಕಳಕನಗೌಡ ಪಾಟೀಲ ಕಲ್ಲೂರ ಅಭಿಮಾನಿ ಬಳಗದ ಅಧ್ಯಕ್ಷರಾದ ರುದ್ರಗೌಡ ಸೊಲಬಗೌಡ್ರ, ಸಂಶೋಧನಾ ವಿದ್ಯಾರ್ಥಿ ಹಾಗೂ ಕಳಕನಗೌಡ ಪಾಟೀಲ ಕಲ್ಲೂರ ಅಭಿಮಾನಿ ಬಳಗದ ಕಾರ್ಯದರ್ಶಿಯಾದ ಮಹಾಂತೇಶ ನೆಲಾಗಣಿ ಹಾಗೂ ಚಾಂದಬಿ ಮಠದ, ಬೀಬಿ ಸಾಹೇರಾ ಮಠದ, ಮಹಮ್ಮದ ಅರ್ಮಾನ ಮಠದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error