ದಾನಗಳಲ್ಲಿಯೇ ಅನ್ನದಾನ ಶ್ರೇಷ್ಠ- ಸಿ.ವಿ.ಚಂದ್ರಶೇಖರ

ಕೊಪ್ಪಳ:ಮನುಷ್ಯ ದಾನಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಪರೋಪಕಾರ ಮನೋಭಾವನೆಯನ್ನು ಅಳವಡಿಸಿಕೊಳ್ಳಬೇಕು. ನಮ್ಮ ಸಂಪತ್ತಿನಲ್ಲಿ ಸ್ವಲ್ಪ ಪ್ರಮಾಣವನ್ನು ದಾನದ ರೂಪದಲ್ಲಿ ನೀಡಿದರೆ ನಮಗೆ ಭಗವಂತ ಒಳ್ಳೆಯದನ್ನೆ ಮಾಡುತ್ತಾನೆ. ದಾನಗಳಲ್ಲಿ ಹಲವು ದಾನಗಳಿವೆ. ಆದರೆ ದಾನಗಳಲ್ಲಿಯೇ ಅನ್ನದಾನ ಶ್ರೇಷ್ಠ. ನಾನು ಕೂಡ ಕಷ್ಟ ಜೀವನವನ್ನು ಅನುಭವಿಸಿ ಮೇಲೆ ಬಂದಿದ್ದೇನೆ. ನನಗೆ ಅನ್ನದ ಬೆಲೆ ಗೊತ್ತಿದೆ. ಆದ್ದರಿಂದ ನಾನು ಯಾವಾಗಲೂ ಅನ್ನದಾನಕ್ಕೆ ಹೆಚ್ಚು ಪ್ರಾದಾನ್ಯತೆ ನೀಡುತ್ತೇನೆ ಎಂದು ಕೊಪ್ಪಳದ ಉದ್ಯಮಿ ಹಾಗೂ ಸಮಾಜಸೇವಕರಾದ ಸಿ.ವಿ.ಚಂದ್ರಶೇಖರ ಹೇಳಿದರು.
ಅವರು ತಮ್ಮ ನಿವಾಸದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯು ಹಮ್ಮಿಕೊಂಡ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕರಾದ ಡಿ.ಬಿ.ಗಡೇದ ಅವರು ಮಾತನಾಡುತ್ತಾ, ಕೊಪ್ಪಳದ ಉದ್ಯಮಿ ಹಾಗೂ ಸಮಾಜಸೇವಕರಾದ ಸಿ.ವಿ.ಚಂದ್ರಶೇಖರ ಅವರು ನಮ್ಮ ಇಲಾಖೆಯಿಂದ ಹಮ್ಮಿಕೊಂಡ ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾಕೂಟದಂದು ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಉಪಹಾರ ಮತ್ತು ಊಟದ ವ್ಯವಸ್ಥೆಯನ್ನು ಮಾಡಿದ್ದಕ್ಕಾಗಿ ನಮ್ಮ ಇಲಾಖೆಯವತಿಯಿಂದ ಅವರಿಗೆ ನಾವು ಸನ್ಮಾನಿಸಿದ್ದೇವೆ ಎಂದರು.
ಕೊಪ್ಪಳ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸೋಮನಗೌಡ ಎಂ.ಪಾಟೀಲ ಮಾತನಾಡುತ್ತಾ, ಸಿ.ವಿ.ಚಂದ್ರಶೇಖರ ಅವರು ಸದಾ ಸಮಾಜದ ಕೆಲಸಗಳಿಗೆ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಹೀಗಾಗಿ ಅವರಿಗೆ ಆ ದೇವರು ಇನ್ನೂ ಹೆಚ್ಚಿನ ಐಶ್ವರ್ಯವನ್ನು ಕೊಟ್ಟು ಕಾಪಾಡಲಿ ಎಂದರು.
ಹಲಗೇರಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಜಿ.ಎಂ.ಭೂಸನೂರಮಠ, ಭಾಗ್ಯನಗರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ರಾಜಶೇಖರ ಪಾಟೀಲ, ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಅರ್ಥಶಾಸ್ತ್ರ ಉಪನ್ಯಾಸಕರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ, ಕೊಪ್ಪಳ ತಾಲೂಕಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಪತ್ರೆಪ್ಪ ಛತ್ತರಕಿ, ಸರಕಾರಿ ನೌಕರರ ಸಂಘದ ನಿರ್ದೇಶಕರಾದ ಎಸ್.ವಿ.ಮೇಳಿ, ಮುನಿರಾಬಾದ ವಿಜಯನಗರ ಕಾಲೇಜಿನ ಪ್ರಾಚಾರ್ಯರಾದ ಬಸವರಾಜ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾದ ಬಸವರಾಜ, ದೈಹಿಕ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷರಾದ ವೀರಭದ್ರಯ್ಯ ಪೂಜಾರ, ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ.ಸಿದ್ದಲಿಂಗಪ್ಪ ಕೊಟ್ನೇಕಲ್, ಭಾಗ್ಯನಗರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕರಾದ ಎಚ್.ಎಸ್.ತಿಮ್ಮಾರೆಡ್ಡಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error