ಧರ್ಮಸ್ಥಳ ಯೋಜನೆಯಿಂದ ಕೆರೆಗೆ ದೇಣಿಗೆ


ಕೊಪ್ಪಳ: ತಾಲೂಕಿನ ಗಿಣಿಗೇರಿ ಕೆರೆ ಪುನಶ್ಚೇತನ ಕಾರ್ಯಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ. ೫ ಲಕ್ಷ ದೇಣಿಗೆ ನೀಡಲಾಗಿದೆ.
ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವರನ್ನು ಗಿಣಿಗೇರಿ ಕೆರೆ ಅಭಿವೃದ್ಧಿ ಸಮಿತಿ ಸದಸ್ಯರು ಭೇಟಿ ಮಾಡಿ ಕೆರೆ ಕಾರ್ಯದ ಕುರಿತು ಮಾಹಿತಿ ನೀಡಿದ್ದರು. ಈ ಸಾಮಾಜಿಕ ಕಾರ್ಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಹೆಗ್ಗಡೆಯವರು ತಮ್ಮ ಸಂಸ್ಥೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು. ಅದೇ ಪ್ರಕಾರ ಈಗ ಗಿಣಿಗೇರಾ ಕೆರೆ ಅಭಿವೃದ್ಧಿ ಸಮಿತಿ ಖಾತೆಗೆ ಯದು ಲಕ್ಷ ರೂಪಾಯಗಳನ್ನು ವರ್ಗಾವಣೆ ಮಾಡಲು ಆದೇಶ ನೀಡಲಾಗಿದ್ದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಬ್ಬಣ್ಣಾಚಾರ್ಯ ವಿದ್ಯಾನಗರ ತಿಳಿಸಿದ್ದಾರೆ.
ಕೆರೆ ಅಭಿವೃದ್ಧಿ ಸಮಿತಿ ಸದಸ್ಯರಾದ ಗೂಳಪ್ಪ ಹಲಗೇರಿ, ವೆಂಕಟೇಶ ಬಾರಕೇರ, ಲಕ್ಷ್ಮಣ್ಣ ಡೊಳ್ಳಿನ್, ಕರಿಯಪ್ಪ ಮೇಟಿ, ನಾಗರಾಜ ಚಳ್ಳೊಳ್ಳಿ, ಎ.ವಿ.ರವಿ, ಯಮನೂರಪ್ಪ ಕಟಗಿ, ಶೇಖರ್ ಇಂದರಗಿ ಸೇರಿದಂತೆ ಇತರರು ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ್ದರು.

Please follow and like us:
error