ನಮ್ಮ ದೇಶದ ಭವಿಷ್ಯಕ್ಕಾಗಿ ಹಲವಾರು ನಾಯಕರು ಶ್ರಮಿಸಿ, ನಮ್ಮ ದೇಶಕ್ಕೆ ಉತ್ತಮ ಸಂವಿಧಾನವನ್ನು ರಚಿಸಿ, ಎಲ್ಲರಿಗೂ ಸ್ವತಂತ್ರರಾಗಿ ಜೀವಿಸುವ ಹಕ್ಕನ್ನು ನೀಡಿದ್ದಾರೆ. ಅದನ್ನು ನಾವೆಲ್ಲರೂ ಕಾಪಾಡಿಕೊಂಡು ಹೋಗಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಹೇಳಿದರು.
ಅವರು ಮಂಗಳವಾರದAದು ಜಿಲ್ಲಾಡಳಿತ ಭವನದ ಆವರಣದಲ್ಲಿ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ನಮ್ಮ ದೇಶ ಬೃಹತ್ ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದ್ದು, ಇಲ್ಲಿ ಹಲವಾರು ಜಾತಿ, ಧರ್ಮ, ಭಾಷೆ, ಮತಗಳನ್ನು ಹೊಂದಿದ್ದು, ಅವುಗಳಿಗೆ ನಾವು ಯಾವುದೇ ಭೇದ-ಭಾವ ಮಾಡದೆ ಎಲ್ಲರೂ ಪರಸ್ಪರ ಸಹೋದರತೆ ಭಾವನೆಯಿಂದ ಶಾಂತಿಯುತವಾಗಿ ಸಹಬಾಳ್ವೆ ನಡೆಸಿದಾಗ ಮಾತ್ರ ನಮ್ಮ ನಾಯಕರ ತ್ಯಾಗ ಬಲಿದಾನ ಮತ್ತು ಸಂವಿಧಾನದ ಆಶಯಗಳಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಜಿ.ಪಂ. ಉಪಕಾರ್ಯದರ್ಶಿ ಶರಣಬಸವರಾಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ನಮ್ಮ ದೇಶದ ಭವಿಷ್ಯಕ್ಕಾಗಿ ಹಲವಾರು ನಾಯಕರು ಶ್ರಮಿಸಿದ್ದಾರೆ: ವಿಕಾಸ್ ಕಿಶೋರ್ ಸುರಳ್ಕರ್
Please follow and like us: