ಕೊಪ್ಪಳ ಜ. 13 ( : 2018-19 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಿ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹರಾಗಿರುವ ಅಭ್ಯರ್ಥಿಗಳ 1 : 1 ರ ಮುಖ್ಯ ಪಟ್ಟಿಯಲ್ಲಿ ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೆ ಇದೇ ಜನವರಿ. 16 ರಂದು ಕೌನ್ಸಲಿಂಗ್ನ್ನು ನಿಗದಿಪಡಿಸಲಾಗಿದೆ. ಕೊಪ್ಪಳ ಜಿಲ್ಲೆಯ 2018-19 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಿ ಸಂಯುಕ್ತ ಸ್ಪಧಾತ್ಮಕ ಪರೀಕ್ಷೆಯಲ್ಲಿ ಅರ್ಹರಾಗಿರುವ ಅಭ್ಯರ್ಥಿಗಳ 1 : 1 ಮುಖ್ಯಪಟ್ಟಿಯನ್ನು ದಿನಾಂಕ: 31/12/2019 ರಂದು ಇಲಾಖಾ ವೆಬ್ ಸೈಟ್ www.schooleducation.kar.nic.in ನಲ್ಲಿ ವಿಶೇಷಾಧಿಕಾರಿಗಳು ಕೇಂದ್ರಿಕೃತ ದಾಖಲಾತಿ ಘಟಕ ಬೆಂಗಳೂರು ರವರು ಇಲಾಖಾ ವೆಬ್ ಸೈಟ್ನಲ್ಲಿ ಪ್ರಕಟಿಸಿರುತ್ತಾರೆ. ಈ ಪಟ್ಟಿಯಲ್ಲಿರುವ ಅರ್ಹ ಅಭ್ಯರ್ಥಿಗಳಿಗೆ ಕೌನ್ಸಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸುವ ಸಂಬAದ ಕೌನ್ಸಲಿಂಗ್ ನಡೆಸಲಾಗುತ್ತಿದೆ. ಜ. 16 ರಂದು ಉಪನಿರ್ದೇಶಕರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಕೊಪ್ಪಳ, ಇಲ್ಲಿ ಕೌನ್ಸಲಿಂಗ್ನ್ನು ಏರ್ಪಡಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ಎಲ್ಲಾ ಶೈಕ್ಷಣಿಕ ಮತ್ತು ಮೀಸಲಾತಿಗೆ ಸಂಬAದಿಸಿದ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಳ್ಳಲು ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (ಆಡಳಿತ) ಬಸವರಾಜಯ್ಯಸ್ವಾಮಿ ಎಸ್.ಎಂ ತಿಳಿಸಿದ್ದಾರೆ.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ : ಜ. 16 ರಂದು ಕೌನ್ಸಲಿಂಗ್
Please follow and like us: