ಪಿ.ಎಂ.ಕೆ.ಎಸ್.ವೈ ಯೋಜನೆಯ ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಿಸಿ

ಕೊಪ್ಪಳ ಡಿ.  : ಪ್ರಧಾನ ಮಂತ್ರಿ ಕೃಷಿ ಸಮ್ಮಾನ ನಿಧಿ (ಪಿ.ಎಂ.ಕೆ.ಎಸ್.ವೈ) ಯೋಜನೆಯಡಿ ನೋಂದಾಯಿಸಿದ ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡುವಂತೆ ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ. “ಪ್ರಧಾನ ಮಂತ್ರಿ ಕೃಷಿ ಸಮ್ಮಾನ ನಿಧಿ” ಯೋಜನೆಯಡಿ ನೋಂದಣಿಯಾದ ಅರ್ಹ ರೈತರಿಗೆ ಕೇಂದ್ರ ಸರ್ಕಾರದಿಂದ ಆರ್ಥಿಕ ಸಹಾಯವು ಆಧಾರ್ ಸಂಖ್ಯೆ ಆಧಾರದ ಮೇಲೆ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ಕೊಪ್ಪಳ ಜಿಲ್ಲೆಯಿಂದ 147887 ಅರ್ಜಿಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದರ ಪೈಕಿ 145066 ಅರ್ಜಿಗಳು ಅಂಗೀಕೃತವಾಗಿದ್ದು, 2821 ಅರ್ಜಿಗಳು ಆಧಾರ್ ವ್ಯಾಲಿಡೇಶನ್ (ಜೋಡಣೆ) ಆಗದೆ ಇರುವ ಕಾರಣ ಹಾಗೂ ಕೆಲವು ರೈತರ ಬ್ಯಾಂಕ್ ಖಾತೆಗಳು ಚಾಲನೆಯಲ್ಲಿ ಇಲ್ಲದಿರುವುದು ಹಾಗೂ ರೈತರ ಬ್ಯಾಂಕ್ ಖಾತೆಗಳು ಉಳಿತಾಯ ಖಾತೆ ಸಂಬAಧ ಪಡದೇ ಇರುವ ಕಾರಣ ಆರ್ಥಿಕ ಸಹಾಯ ವರ್ಗಾವಣೆ ಆಗಿರುವುದಿಲ್ಲ. ಸದರಿ ಪಟ್ಟಿಯನ್ನು “ ರೈತ ಸಂಪರ್ಕ ಕೇಂದ್ರದಲ್ಲಿ ” ಲಗತ್ತಿಸಲಾಗಿದೆ. ಆದ್ದರಿಂದ ಪ್ರಧಾನ ಮಂತ್ರಿ ಕೃಷಿ ಸಮ್ಮಾನ ನಿಧಿ ಯೋಜನೆಯಡಿ ನೋಂದಣಿಯಾದ ಅರ್ಹ ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಬೇಕು ಹಾಗೂ ಇತರೆ ನ್ಯೂನ್ಯತೆಗಳನ್ನು ಸರಿಪಡಿಸುವ ಬಗ್ಗೆ ತಿಳಿಯಲು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಪ್ರಕಟಣೆ ಮೂಲಕ ರೈತ ಬಾಂಧವರಲ್ಲಿ ಕೋರಿದ್ದಾರೆ.

Please follow and like us:
error