ಫೆ. 4-5 ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ : ಅಮರದೀಪ್‌ ಛಾಯಾಚಿತ್ರ ಪ್ರದರ್ಶನ

ಕೊಪ್ಪಳ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ. 4 ಮತ್ತು 5ರಂದು ಆಯೋಜನೆಯಾಗಿರುವ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಅಮರದೀಪ ಪಿ.ಎಸ್.‌ ಅವರ ಛಾಯಾಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಕೋವಿಡ್‌ ನಂತರದ ಮೊದಲ ಚಿತ್ರ ಪ್ರದರ್ಶನ ಇದಾಗಿದೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಲ್ಲಿ ಸಹಾಯಕ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಆಡಳಿತಾಧಿಕಾರಿಯೂ ಆಗಿರುವ ಅಮರದೀಪ ಅವರು ಖ್ಯಾತ ಹವ್ಯಾಸಿ ಛಾಯಾಗ್ರಾಹಕರೂ ಹೌದು. ಈ ಹಿಂದೆಯೂ ಅವರು ಹಲವಾರು ಸಂದರ್ಭಗಳಲ್ಲಿ ವಿವಿಧ ವಿಷಯಗಳ ಕುರಿತ ಛಾಯಾಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಿದ್ದಾರೆ.
ಆಸಕ್ತರು ಆಗಮಿಸಿ, ವೀಕ್ಷಿಸಿ, ಚಿತ್ರಗಳ ಕುರಿತ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬೇಕೆಂದು ಅವರು ವಿನಂತಿಸಿದ್ದಾರೆ.

Please follow and like us:
error