ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ

ಕೊಪ್ಪಳ, : ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಎಲ್ಲ ರೀತಿಯ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಮಾ.31) ದಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ವತಿಯಿಂದ ನಡೆದ ಬಾಲಕಾಮಿಕ ಪದ್ಧತಿ ನಿರ್ಮೂಲನಾ ಕ್ರಿಯಾ ಯೋಜನೆಯ ಅನುಷ್ಠಾನ ಪ್ರಗತಿ ಕುರಿತಂತೆ ಚರ್ಚಿಸಲು ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಣಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಬಾಲಕಾರ್ಮಿಕರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದು, ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಸಂಬAಧಪಟ್ಟ ಅಧಿಕಾರಿಗಳು ನಗರ ಮತ್ತು ಗ್ರಾಮೀಣ ಭಾಗದ ಜನರಲ್ಲಿ ಜಾಗೃತಿ ಮತ್ತು ಕಾನೂನಿನ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ರೂಪಿಸಬೇಕು. ನಗರದ ಹಾಗೂ ಜಿಲ್ಲೆಯ ಇತರೆ ಪ್ರದೇಶಗಳಲ್ಲಿರುವ ಕಾರ್ಖಾನೆಗಳು, ಕೈಗಾರಿಕೆ ಪ್ರದೇಶಗಳು, ಹೋಟೆಲ್ ಉದ್ಯಮಗಳು ಮುಂತಾದ ಕಡೆಗಳಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಪುನರ್ವಸತಿ ಕಲ್ಪಿಸಬೇಕು. ಹಾಗೂ ಮಕ್ಕಳನ್ನು ಬಾಲ ಕಾರ್ಮಿಕತೆಗೆ ತಳ್ಳಿದ ಪೋಷಕರಿಗೆ ಸೂಕ್ತ ಸಮಾಲೋಚನೆ ಮೂಲಕ ಮಕ್ಕಳ ಶಿಕ್ಷಣ ಹಾಗೂ ಉತ್ತಮ ಜೀವನ ರೂಪಿಸಲು ಮುಂದಾಗುವAತೆ ಮನವರಿಕೆ ಮಾಡಿಕೊಡಬೇಕು ಎಂದು ಅವರು ತಿಳಿಸಿದರು.
ಕರ್ನಾಟಕ ಸರ್ಕಾರದ ನಡಾವಳಿಗಳಲ್ಲಿ ಉಲ್ಲೇಖಿತ ಅಂಶಗಳನ್ನು ಜಾರಿಗೆ ತರಲು ಅಗತ್ಯ ಕ್ರಮ ಜರುಗಿಸಬೇಕು. ರಕ್ಷಿಸಲ್ಪಟ್ಟ ಬಾಲಕಾರ್ಮಿಕರನ್ನು ನಿಯಮಾನುಸಾರವಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದ ನಂತರದಲ್ಲಿ ವಸತಿ ನಿಲಯಗಳಿಗೆ ದಾಖಲಿಸಬೇಕು. ಬಾಲಕಾರ್ಮಿಕರ ಕುಟುಂಬಕ್ಕೆ ಆದಾಯದ ಮೂಲವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಯೋಜನೆಗಳನ್ನು ಪರಿಚಯಿಸಿ, ಸ್ವಾವಲಂಬನೆಯಿAದ ಜೀವನ ನಡೆಸಲು ಅನುಕೂಲವನ್ನು ಒದಗಿಸಬೇಕು. ಹಾಗೂ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ನಗರಸಭೆಗಳಿಂದ ಇರುವ ಯೋಜನೆಗಳಿಗೆ ಬಾಲಕಾರ್ಮಿಕರ ಕುಟುಂಬ ವರ್ಗದವರನ್ನು ಸಂಪರ್ಕ ಕಲ್ಪಿಸಿ ಕೊಡುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕಲಂ 17ರ ನಿಯಮದಡಿ ಅಧಿಕಾರಿಗಳು ಬಾಲಕಾರ್ಮಿಕ ನಿರ್ಮೂಲನಾ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಮತ್ತು ಸಂಬAಧಿಸಿದ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಸಿಬ್ಬಂದಿಗೆ ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿ, ಬಾಲಕಾರ್ಮಿಕರನ್ನು ಪತ್ತೆಹಚ್ಚುವ ಹಾಗೂ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಬೇಕು. ಬಾಲಕಾರ್ಮಿಕ ಯೋಜನಾಧಿಕಾರಿಗಳು ನಿಯಮಿತವಾಗಿ ಹೆಚ್ಚಿನ ಪ್ರಮಾಣದಲ್ಲಿ ಬಾಲಕಾರ್ಮಿಕ ತಪಾಸಣೆಗೆ ವಿವಿಧ ಪ್ರದೇಶ, ಕಾರ್ಖಾನೆ, ಮಾರುಕಟ್ಟೆಗಳಿಗೆ ಭೇಟಿ ನೀಡುವಂತೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ, ಗುಳೆ ಹೋದವರು ಹಾಗೂ ವಾಪಸ್ ಬಂದವರ ಮಕ್ಕಳ ಬಗ್ಗೆ ಪರಿಶೀಲನೆ ಮಾಡಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬೇರೆ-ಬೇರೆ ಕಾರ್ಯತಂತ್ರಗಳ ಮುಖಾಂತರ ಗುಳೆ ಹೋದವರು ಹಾಗೂ ವಾಪಸ್ ಬಂದವರ ಮಕ್ಕಳ ಪರಿಶೀಲನೆ ಕಾರ್ಯ ಮಾಡುವುದರಿಂದ ಕೂಡ ಮಕ್ಕಳು ಬಾಲಕಾರ್ಮಿಕತೆಗೆ ಒಳಗಾಗುವುದನ್ನು ತಪ್ಪಿಸಬಹುದು ಎಂದು ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನವೀನ್ ಶಿಂತ್ರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ, ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error