ಬಿ.ಎಡ್., ಡಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಕೊಪ್ಪಳ ಡಿ.೧೨: ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯಿಂದ ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್ ನಿಂದ ಮಾನ್ಯತೆ ಪಡೆದಿರುವ ಬಿ.ಎಡ್ ಹಾಗೂ ಡಿಪಾರ್ಟ್‌ಮೆಂಟ್ ಆಫ್ ಸ್ಟೇಟ್ ಎಜುಕೇಶನ್ ರೀಸರ್ಚ್ & ಟ್ರೈನಿಂಗ್ ನಿಂದ ಮಾನ್ಯತೆ ಪಡೆದಿರುವ ಡಿ.ಎಡ್ ಕೋರ್ಸ್‌ಗಳ ಸರ್ಕಾರಿ/ ಅರೆಸರ್ಕಾರಿ/ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸ್‌ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ದಾಖಲಾತಿ ಹೊಂದಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ, ವಿದ್ಯಾರ್ಥಿಗಳಿಗೆ ರೂ. ೨೫೦೦೦/- ಗಳ ವಿಶೇಷ ಪ್ರೋತ್ಸಾಹಧನ ಪ್ರತಿ ವರ್ಷ (ಗರಿಷ್ಠ ೨ ವರ್ಷ ಮಾತ್ರ) ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸಲು ಡಿ. ೧೫ ಕೊನೆಯ ದಿನವಾಗಿದ್ದು, ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ತಮ್ಮ ಸ್ವವಿವರರನ್ನು ನೋಂದಣಿ ಮಾಡಬೇಕು. ಆನ್‌ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ನಮೂನೆಯ ಪ್ರಿಂಟ್ ಔಟ್ ಜೊತೆಗೆ ಅಗತ್ಯವಾದ ಧಾಖಲಾತಿಗಳನ್ನು ಸಂಬಂಧಪಟ್ಟ ತಾಲೂಕುಗಳಲ್ಲಿರು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು. ಅರ್ಹತಾ ಮಾನದಂಡಗಳು, ಅಗತ್ಯ ದಾಖಲೆಗಳ ವಿವರಗಳು ಜಿಲ್ಲಾ ಕಛೇರಿಯ ವೈಬ್‌ಸೈಟ್ www.dom.karnataka.gov.in/koppal ಅಥವಾ www.gokdom.kar.nic.in ನಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಪ್ಪಳ, ಜಿಲ್ಲಾಡಳಿತ ಭವನ, ಕೊಪ್ಪಳ ಈ ವಿಳಾಸಕ್ಕೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಅಥವಾ ಇಲಾಖಾ ವೈಬ್‌ಸೈಟ್ ನಲ್ಲಿಯೂ ಸಹ ಪಡೆಯಬುದಾಗಿದೆ ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಿಮೂದ್  ತಿಳಿಸಿದ್ದಾರೆ.

Please follow and like us:
error