ಬೆಂಗಳೂರಿನಲ್ಲಿ ಕೊರೋನ ವೈರಸ್ ಪತ್ತೆಯಾಗಿದೆ ಎಂಬುದು ಸುಳ್ಳು ಸುದ್ದಿ: ಸಚಿವ ಶ್ರೀರಾಮುಲು

ಬೆಂಗಳೂರು, ಮಾ.9: ಬೆಂಗಳೂರಿನಲ್ಲಿ ಕೊರೋನ ವೈರಸ್ ಸೋಂಕು ಪತ್ತೆಯಾಗಿದೆ ಎಂದು ಕೆಲವೊಂದು ಮಾಧ್ಯಮ ಹಾಗೂ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕೋರೋನ ವೈರಸ್ ಸೋಂಕು ಹರಡದಂತೆ ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆಯು ಎಲ್ಲ ರೀತಿಯ ಸಮರ್ಪಕ ಕ್ರಮಗಳನ್ನು ಕೈಗೊಂಡಿದೆ. ನಾಗರಿಕರು ಯಾವುದೇ ಆತಂಕಪಡಬೇಕಾಗಿಲ್ಲ ಎಂದು ತಿಳಿಸಿದ್ದಾರೆ.

Please follow and like us:
error