ಮಾರ್ಚ ೧ ರಂದು ಜೆಡಿಎಸ್ ಸಭೆ


ಕೊಪ್ಪಳ : ನಗರದ ಮಹಾಂತಯ್ಯನಮಠ ಕಲ್ಯಾಣ ಮಂಟಪದಲ್ಲಿ ಮಾರ್ಚ ೧ ರಂದು ಬೆಳಿಗ್ಗೆ ೧೦ ಗಂಟೆಗೆ ಕರ್ನಾಟಕ ಪ್ರದೇಶ ಜನತಾದಳ ಜಾತ್ಯಾತೀತ ಪಕ್ಷದಿಂದ ಸಭೆಯನ್ನು ಏರ್ಪಡಿಸಲಾಗಿದ್ದು,
ಈ ಸಭೆಯಲ್ಲಿ ಕಲ್ಯಾಣ ಕರ್ನಾಟಕ ವಿಭಾಗದ ವಿಕ್ಷಕರುಗಳಾದ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ವೆಂಕಟರಾವ್ ನಾಡಗೌಡ್ರು, ಬಂಡೆಪ್ಪ ಕಾಶಂಪುರ, ಶಾಸಕರಾದ ರಾಜಾವೆಂಕಟಪ್ಪ ನಾಯಕ ವಿಕ್ಷಕರಾದ ಕರಿಯಮ್ಮ ನಾಯಕ, ರಾಷ್ಟ್ರೀಯ ಕಾರ್ಯದರ್ಶಿ ವೀರೇಶ ಮಾಹಾಂತಯ್ಯನಮಠ, ರಾಜ್ಯ ಉಪಾಧ್ಯಕ್ಷರಾದ ಪ್ರದೀಪಗೌಡ ಮಾಲಿಪಾಟೀಲ, ಹೆಚ್. ಆರ್. ಶ್ರೀನಾಥ, ಕೆ.ಎಂ. ಸೈಯದ್, ಜಿಲ್ಲಾಧ್ಯಕ್ಷರಾದ ಅಮರೇಗೌಡ ಪಾಟೀಲ ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಯ ಕುರಿತು ಚರ್ಚಿಸುವುದು ಹಾಗೂ ಜಿಲ್ಲಾ ಮತ್ತು ತಾಲೂಕು ಘಟಕಗಳಿಗೆ ಹೊಸದಾಗಿ ಪಕ್ಷದ ಸಮೀತಿ ರಚನೆ ಬಗ್ಗೆ, ಮುಂಬರುವ ಜಿಲ್ಲಾ ಪಂಚಾಯತಿ, ತಾಲೂಕ ಪಂಚಾಯತಿ ಹಾಗೂ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಅಭಿಪ್ರಾಯ ಸಂಗ್ರಹಣೆ ಮಾಡಲಾಗುವುದು.
ಈ ಮಹತ್ವದ ಸಭೆಗೆ ಜಿಲ್ಲೆಯ ಎಲ್ಲಾ ತಾಲೂಕಿನ ಅಧ್ಯಕ್ಷರುಗಳು, ಪದಾಧಿಕಾರಿಗಳು, ಈ ಹಿಂದೆ ಸ್ಥಳಿಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪಕ್ಷದ ಜಿಲ್ಲಾ ವಕ್ತಾರ ಮೌನೇಶ ಎಸ್ ವಡ್ಡಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error