ಮಾ. ೦೧ ರಿಂದ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಕೊಪ್ಪಳ ಫೆ. : ಕೊಪ್ಪಳ ಜಿಲ್ಲೆಯಲ್ಲಿ ಮಾ. ೦೧ ರಿಂದ ೧೮ ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ. ೦೧ ರಿಂದ ೧೮ ರವರೆಗೆ ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಪರೀಕ್ಷೆಗಳನ್ನು ಸುಗಮವಾಗಿ ನಡೆಸುವ ಸಲುವಾಗಿ, ಪರೀಕ್ಷಾ ದಿನಗಳಂದು, ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧-೩೦ ಗಂಟೆಯವರೆಗೆ ಪರೀಕ್ಷಾ ಕೇಂದ್ರ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ೧೯೭೩ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಪೇಜರ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ಕಾಫಿ ಮಾಡುವ ಸಾಮಾಗ್ರಿಗಳನ್ನು ಹಾಗೂ ಹೊರಗಿನಿಂದ ಕಾಫಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. ನಿಷೇಧಿತ ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ವಿವರ : ಮಾ. ೦೧ ರಿಂದ ೧೮ ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯುವ ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ. ಕೊಪ್ಪಳದ ಗವಿಸಿದ್ದೇಶ್ವರ ಪ.ಪೂ ಕಾಲೇಜು, ಬಾಲಕರ ಸರಕಾರಿ ಪ.ಪೂ ಕಾಲೇಜು, ಬಾಲಕಿಯರ ಸರಕಾರಿ ಪ.ಪೂ ಕಾಲೇಜು, ಬಿ.ಎನ್.ಆರ್.ಕೆ ಪ.ಪೂ ಕಾಲೇಜು, ಯಲಬುರ್ಗಾ ತಾಲೂಕಿನ ಸರಕಾರಿ ಪ.ಪೂ ಕಾಲೇಜು, ಕುಕನೂರ ತಾಲೂಕಿನ ವಿದ್ಯಾನಂದ ಗುರುಕುಲ ಪ.ಪೂ ಕಾಲೇಜು, ಕುಷ್ಟಗಿ ತಾಲೂಕಿನ ಸರಕಾರಿ ಬಾಲಕರ ಪ.ಪೂ ಕಾಲೇಜು, ಸರಕಾರಿ ಬಾಲಕಿಯರ ಪ.ಪೂ ಕಾಲೇಜು, ತಾವರಗೇರಾದ ಸರಕಾರಿ ಬಾಲಕೀಯರ ಪ.ಪೂ ಕಾಲೇಜು, ಗಂಗಾವತಿ ತಾಲೂಕಿನ ಸರಕಾರಿ ಬಾಲಕರ ಪ.ಪೂ ಕಾಲೇಜು, ಹೆಚ್.ಆರ್. ಸರೋಜಮ್ಮ ಪ.ಪೂ ಕಾಲೇಜು, ಸರಕಾರಿ ಎಸ್.ಎಂ.ಎನ್.ಎಂ ಬಾಲಕೀಯರ ಪ.ಪೂ ಕಾಲೇಜು, ಕಾರಟಗಿಯ ಸರಕಾರಿ ಪ.ಪೂ ಕಾಲೇಜು, ಎ.ಕೆ.ಆರ್. ದೇವಿ ಪ.ಪೂ ಕಾಲೇಜು ಶ್ರೀರಾಮ ನಗರ, ಕನಕಗಿರಿಯ ಸರಕಾರಿ ಪ.ಪೂ ಕಾಲೇಜು, ಮತ್ತು ವಾಯ್. ಜನತಾರಾಣಿ ಪ.ಪೂ ಕಾಲೇಜು ವಿದ್ಯಾನಗರ ಗಂಗಾವತಿ, ಜಿಲ್ಲೆಯ ಈ ೧೬ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಜಿಲ್ಲೆಯ ೧೨೯೭೭ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ .

Please follow and like us:
error