ಮಾ. 14 ಮತ್ತು 15 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಕೊಪ್ಪಳ,ಮಾ.  : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಮಾ. 14 ಮತ್ತು 15 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಉದ್ಘಾಟನಾ ಸಮಾರಂಭವು ಮಾ. 14 ಬೆಳಿಗ್ಗೆ 09 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು, ಸಾರಿಗೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಉಪಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಐಟಿ & ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ.ಅಶ್ವಥ್ ನಾಯಯಣ್ ಸಿ.ಎನ್ ಅವರು ಘನ ಉಪಸ್ಥಿತರಿರುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್.ವಿಶ್ವನಾಥರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್. ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್, ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ್ ಇಟಗಿ, ಶರಣಪ್ಪ ಮಟ್ಟೂರು, ಡಾ. ಚಂದ್ರಶೇಖರ ಬಿ. ಪಾಟೀಲ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್ ಪಾಲ್ಗೊಳ್ಳುವರು. ವಿಶೇಷ ಆಹ್ವಾನಿತರಾಗಿ ಕಂದಾಯ ಇಲಾಖೆ ಸರ್ಕಾರದ ಪ್ರದಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ ಎನ್., ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತ ಕೆ.ಪಿ. ಮೋಹನ್ ರಾಜ್ ಭಾಗವಹಿಸುವರು. ಮಾ. 15 ರಂದು ಉದ್ಯೋಗದಾತರಿಂದ ಉದ್ಯೋಗಾಕಾಂಕ್ಷಿಗಳ ಸಂದರ್ಶನ ಹಾಗೂ ಆಯ್ಕೆಯಾದ ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Please follow and like us:
error