’ಮಿಷನ್-೨೦೦’ ಅಭಿಯಾನಕ್ಕೆ ಹಲಗೇರಿಯಲ್ಲಿ ಸಂಸದ ಕರಡಿ ಸಂಗಣ್ಣ ಚಾಲನೆ

  ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕೊಪ್ಪಳ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾ ಪಂಚಾಯತಿ ವತಿಯಿಂದ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಿಷನ್-೨೦೦ ಕಾರ್ಯಕ್ರಮಕ್ಕೆ ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಚಾಲನೆ ನೀಡಿದರು.    ಕೊಪ್ಪಳ ಜಿಲ್ಲೆಯನ್ನು ಅಕ್ಟೋಬರ್ ೦೨ ರ ಒಳಗಾಗಿ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿ ನಿರ್ಮಿಸಲು ಜಿಲ್ಲಾ ಪಂಚಾಯತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಿಷನ್-೨೦೦ ಅಂದರೆ ಜಿಲ್ಲೆಯಲ್ಲಿ ಸೆ. ೦೮ ರಿಂದ  ೧೬ ರವರೆಗೆ ೨೦೦ ಗಂಟೆಗಳಲ್ಲಿ ೨೦ ಸಾವಿರ ಶೌಚಾಲಯ ನಿರ್ಮಿಸುವ ಗುರಿ ಹೊಂದಲಾಗಿದ್ದು, ಈ ಅಭಿಯಾನಕ್ಕೆ ಸಂಸದ ಕರಡಿ ಸಂಗಣ್ಣ ಅವರು ಚಾಲನೆ ನೀಡಿದರು.  ಬಳಿಕ ಮಾತನಾಡಿದ ಅವರು ಸಾರ್ವಜನಿಕರು ಬಯಲು ಬಹಿರ್ದೆಸೆ ಹೋಗುವುದರಿಂದ ಅನೇಕ ಮಾರಕ ರೋಗಗಳು ಹರಡುತ್ತವೆ.   ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ರೂ. ೧೫,೦೦೦/-, ಇತರೆ ಕುಟುಂಬಗಳಿಗೆ ರೂ. ೧೨,೦೦೦/-ಗಳ ಸಹಾಯಧನವನ್ನು ಸರ್ಕಾರದಿಂದ ನೀಡಲಾಗುತ್ತಿದೆ.  ಎಲ್ಲರೂ ವೈಯಕ್ತಿಕ ಶೌಚಾಲಯವನ್ನು ನಿರ್ಮಿಸಿಕೊಳ್ಳಿ. ಹಲಗೇರಿ ಗ್ರಾಮ ಪಂಚಾಯತಿಯು ೧೩೩೩ ಕುಟುಂಬಗಳು ಹೊಂದಿದ್ದು, ೧೨೪೯ ಕುಟುಂಬಗಳು ಈಗಾಗಲೆ ವೈಯಕ್ತಿಕ ಶೌಚಾಲಯಗಳನ್ನು ಹೊಂದಿವೆ. ಇನ್ನು ಕೇವಲ ೮೪ ಕುಟುಂಬಗಳು ಹೊಂದಬೇಕಾಗಿರುತ್ತದೆ.  ೨೦೦ ಗಂಟೆಗಳ ಅವಧಿಯಲ್ಲಿ ಉಳಿದ ಕುಟುಂಬಗಳು ಶೌಚಾಲಯ ಹೊಂದಬೇಕೆಂಬ ಉದ್ದೇಶದಿಂದ ಮಿಷನ್-೨೦೦ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾ ಪಂಚಾಯತಿಯಿಂದ ಹಮ್ಮಿಕೊಳ್ಳಲಾಗಿದ್ದು ಒಂದು ಶುಭ ಸಂಕೇತವಾಗಿದೆ ಎಂದರು. ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಟಿ. ಕೃಷ್ಣಮೂರ್ತಿ, ಹಲಗೇರಿ ಗ್ರಾ.ಪಂ. ಅಧ್ಯಕ್ಷ ದೇವಪ್ಪ ಓಜಿನಹಳ್ಳಿ, ಉಪಾಧ್ಯಕ್ಷ ಶರಣಯ್ಯ ಹಿರೇಮಠ ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತಿ ಸರ್ವ ಸದಸ್ಯರು, ಸ್ವಸಹಾಯ ಸಂಘದ ಮಹಿಳಾ ಸದಸ್ಯರು, ಶಾಲಾ ಮುಖ್ಯೋಪಾಧ್ಯಯರುಗಳು, ಶಾಲಾ ಮಕ್ಕಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಪಿಡಿಒ, ಜಿಲ್ಲಾ ಎಸ್.ಬಿ.ಎಂ ಸಮಾಲೋಚಕರು, ತಾಲೂಕ ಎಂ.ಜಿ.ಎನ್.ಆರ್.ಜಿ.ಎ ಸಿಬ್ಬಂದಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಓಜನಹಳ್ಳಿಯಲ್ಲಿ ಮಿಷನ್ ೨೦೦ ಅಭಿಯಾನಕ್ಕೆ ಬಿಇಒ ಎಂ.ಜಿ. ದಾಸರ್ ಅವರಿಂದ ಚಾಲನೆ

ಕೊಪ್ಪಳ ತಾಲೂಕು ಓಜನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನಡಿಯಲ್ಲಿ ಫಲಾನುಭವಿಗಳಿಗೆ ಶೌಚಾಲಯ ಕಟ್ಟಿಸಿಕೊಳ್ಳಲು ಆದೇಶ ಮಂಜೂರಾತಿ ಪ್ರತಿಯನ್ನು ನೀಡುವುದರ ಮೂಲಕ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಜಿ. ದಾಸರ್ ಅವರು ಮಿಷನ್ ೨೦೦ ಅಭಿಯಾನಕ್ಕೆ ಚಾಲನೆ ನೀಡಿದರು.  ಓಜನಹಳ್ಳಿ ಗ್ರಾಮ ಪಂಚಾಯತಿಯನ್ನು ಅಕ್ಟೋಬರ್ ೦೨ ರ ಒಳಗಾಗಿ ಬಯಲು ಬಹಿರ್ದೆಸೆ ಮುಕ್ತ ಗ್ರಾಮವನ್ನಾಗಿಸಲು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.  ಈ ಹಿನ್ನೆಲೆಯಲ್ಲಿ ಮಿಷನ್ ೨೦೦ ಅಭಿಯಾನದಡಿ ಎಲ್ಲ ಕುಟುಂಬಗಳು ತಪ್ಪದೆ ಶೌಚಾಲಯವನ್ನು ಹೊಂದುವಂತಾಗಲು, ಶೌಚಾಲಯ ರಹಿತ ಕುಟುಂಬಗಳನ್ನು ಗುರುತಿಸಿ, ಅವರಿಗೆ ಶೌಚಾಲಯ ಕಟ್ಟಿಸಿಕೊಳ್ಳಲು ತಿಳಿಸಲಾಗುತ್ತಿದೆ.  ಕಾರ್ಯಕ್ರಮದ ಅಂಗವಾಗಿ ಶೌಚಾಲಯ ಜಾಗೃತಿಗಾಗಿ ವಿದ್ಯಾರ್ಥಿಗಳು ಪ್ರಭಾತಫೇರಿ ನಡೆಸಿದರು.       ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತ ಸದಸ್ಯರು, ಓಜನಹಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷರು, ಗ್ರಾಮ ಪಂಚಾಯತ ಸರ್ವಸದಸ್ಯರು, ಶಿಕ್ಷಣ ಸಂಯೋಜಕರು, ಶಾಲಾ ಮುಖ್ಯೋಪಾಧ್ಯಾರು, ಶಿಕ್ಷಕರು, ಎಸ್.ಡಿ.ಎಮ್.ಸಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

Please follow and like us:
error