ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕೊಪ್ಪಳ,  ): ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್.20 ರವರೆಗೆ ಅವಕಾಶವನ್ನು ನೀಡಲಾಗಿತ್ತು. ಆದರೆ ಕೆಲವು ವಿಶ್ವವಿದ್ಯಾನಿಲಯಗಳಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಫೆಬ್ರವರಿ ಮಾಹೆಯಿಂದ ಕಾಲೇಜುಗಳು ಆರಂಭವಾಗಿದ್ದು, ವಿದ್ಯಾರ್ಥಿಗಳ, ಪೋಷಕರ ಹಾಗೂ ಶೈಕ್ಷಣಿಕ ಸಂಸ್ಥೆಗಳ ಮನವಿ ಮೇರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಏಪ್ರಿಲ್.20 ರವರೆಗೆ ವಿಸ್ತರಿಸಲಾಗಿದೆ.
ವೆಬ್‌ಸೈಟ್ ವಿಳಾಸ  www.ssp.postmatric.karnataka.gov.in     ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ  www.bcwd.karnataka.gov.in     ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಸಂಖ್ಯೆ: 080-35254757, ಇ-ಮೇಲ್ ವಿಳಾಸ  postmetrichelpdesk@karnataka.gov.in     ಅಥವಾ ಸಹಾಯವಾಣಿ ಸಂಖ್ಯೆ: 8050770005, 8050770004
ಇ-ಮೇಲ್  bcwd.scholarship@karnataka.gov.in    ಗೆ ಸಂಪರ್ಕಿಸಬಹುದು

Please follow and like us:
error