ರಾಜ್ಯ ಮಹಿಳಾ ಕಾಂಗ್ರೆಸ್‌ಗೆ ಪ್ರಧಾನ ಕಾರ್ಯದರ್ಶಿಯಾಗಿ ಇಂದಿರಾ ಬಾವಿಕಟ್ಟಿ ನೇಮಕ


ಕೊಪ್ಪಳ : ಏ.೦೧, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಬಿ.ಪುಷ್ಪ ಅಮರನಾಥ ಹಾಗೂ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸುಶ್ಮಿತಾ ದೇವ್ ಅವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯನ್ನಾಗಿ ಶ್ರೀಮತಿ ಇಂದಿರಾ ಬಾವಿಕಟ್ಟಿಯವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ದೇಶದ ಆಡಳಿತದ ಮುಖ್ಯವಾಹಿನಿಗೆ ತರಲು ಹಾಗೂ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ದುಡಿಯುತ್ತಿರೆಂದು ಈ ಮಹತ್ತರವಾದ ಜವಬ್ಧಾರಿಯನ್ನು ವಹಿಸಲಾಗಿದೆ.

Please follow and like us:
error