fbpx

ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ : ನಿಷೇಧಾಜ್ಞೆ ಜಾರಿ


ಕೊಪ್ಪಳ, : ಆಗಸ್ಟ್. 05 ರಂದು ಜರುಗಲಿರುವ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಆದೇಶ ಹೊರಡಿಸಿದ್ದಾರೆ.
ಆಗಸ್ಟ್. 05 ರಂದು ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಜರುಗುವ ಪ್ರಯುಕ್ತ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಆಗಸ್ಟ್. 04 ರ ಸಂಜೆ 05 ಗಂಟೆಯಿAದ ಆ. 06ರ ಬೆಳಿಗ್ಗೆ 10 ಗಂಟೆಯವರೆಗೆ ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ, ಕನಕಗಿರಿ ಹಾಗೂ ಕಾರಟಗಿ ನಗರದಾದ್ಯಂತ ಅಪರಾಧಿಕ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಆದೇಶದನ್ವಯ ಮೆರವಣಿಗೆ ಸೇರುವುದನ್ನು ಹಾಗೂ ವಿಜಯೋತ್ಸವ ಆಚರಿಸುವುದನ್ನು ನಿಷೇಧಿಸಲಾಗಿದೆ. ಸಭೆ, ಸಮಾರಂಭ ಹಾಗೂ ವಿಚಾರಗೋಷ್ಠಿ, ಕಾರ್ಯಾಗಾರ ಮಾಡುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಹಾಗೂ ಸ್ಪೋಟಕ ವಸ್ತುಗಳನ್ನು ಅಥವಾ ಯಾವುದೇ ದಾಹಕ ವಸ್ತುಗಳನ್ನು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಶವಾಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿಬಂಧಿಸಲಾಗಿದ್ದು, ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು ಪ್ರತಿಕೃತಿಗಳು, ಮುಂತಾದವುಗಳನ್ನು ಪ್ರದರ್ಶಿಸುವುದನ್ನು ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ

Please follow and like us:
error
error: Content is protected !!