ರೈಸ್ ಟೆಕ್ನಾಲಜಿ ಪಾರ್ಕ್ನಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯೋಗಾವಕಾಶ ಹೆಚ್ಚಲಿವೆ : ಬಿ.ಸಿ. ಪಾಟೀಲ್


ಕೊಪ್ಪಳ ಮೇ.  : ಕೊಪ್ಪಳ ಜಿಲ್ಲೆಯ ಕಾರಟಗಿಯ ರೈಸ್ ಟೆಕ್ನಾಲಜಿ ಪಾರ್ಕ್ನಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ  ಉದ್ಯೋಗಾವಕಾಶಗಳು ಹೆಚ್ಚಾಗುವುದರ ಜೊತೆಗೆ ಇದು ರಾಷ್ಟç ಮತ್ತು ಅಂತರಾಷ್ಟಿçÃಯ ವಹಿವಾಟಿಗೆ ಅನುಕೂಲವಾಗಲಿದೆ ಎಂದು ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್ ಹೇಳಿದರು.
ಅವರು ಇಂದು ಕಾರಟಗಿಯ ರೈಸ್ ಟೆಕ್ನಾಲಜಿ ಪಾರ್ಕ್ಗೆ ಭೇಟಿ ನೀಡಿದ ನಂತರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕದ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ರೈಸ್ ಟೆಕ್ನಾಲಜಿ ಪಾರ್ಕ್ ನಿರ್ಮಾಣವು ಉನ್ನತ ಧ್ಯೇಯೋದ್ದೇಶದೊಂದಿಗೆ ಭತ್ತ ಮತ್ತು ಅಕ್ಕಿ ಉತ್ಪನ್ನಗಳ ಹಾಗೂ ವಿಶೇಷ ಕೃಷಿ ಉತ್ಪನ್ನ ಮಾರುಕಟ್ಟೆಯಾಗಲಿದ್ದು, ಇದು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲಿದ್ದು, ಈ ಮಾರುಕಟ್ಟೆ ಸಮಿತಿಯು ಕಾರಟಗಿ, ಸಿದ್ದಾಪುರ ಮತ್ತು ನವಲಿ ಹೋಬಳಿ ಕಾರ್ಯ ವ್ಯಾಪ್ತಿಯಲ್ಲಿ ಬರುವುದರಿಂದ ವಿಶೇಷವಾಗಿ ಈ ಭಾಗಕ್ಕೆ ತುಂಬಾ ಅನುಕೂಲವಾಗಲಿದೆ ಎಂದರು.
ಇದರ ಮುಖ್ಯ ಉದ್ದೇಶ ಎಲ್ಲಾ ಸಮಸ್ಯೆಗಳಿಗೆ ಏಕಗವಾಕ್ಷಿ ಪರಿಹಾರ, ಉಪಉತ್ಪನ್ನಗಳ ತಯಾರಿಕಾ ಘಟಕಗಳ ಸ್ಥಾಪನೆ, ರಾಷ್ಟç ಮತ್ತು ಅಂತರಾಷ್ಟಿçÃಯ ಮಾರುಕಟ್ಟೆ ಜೋಡಣೆ, ಭತ್ತದ ಹುಟ್ಟುವಳಿಯನ್ನು ಭವಿಷ್ಯತ್ತಿನ ಮಾರುಕಟ್ಟೆಗೆ ಜೋಡಣೆ ಮತ್ತು ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವಕ್ಕೆ ಉತ್ತೇಜನ ನೀಡುವುದರ ಜೊತೆಗೆ ಭತ್ತದ ಸಾಗಾಣಿಕೆ ವೆಚ್ಚವೂ ಕಡಿಮೆಯಾಗಲಿದೆ. ರೈತರು ಹಾಗೂ ಕೃಷಿ ಚಟುವಟಿಕೆಗಳಿಗೆ ಲಾಕ್‌ಡೌನ್ ಸಂದರ್ಭದಲ್ಲಿ  ಯಾವುದೇ ತೊಂದರೆಯಾಗದAತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.
ಈ ಭಾಗದಲ್ಲಿ ಇಂತಹ ಒಂದು ರೈಸ್ ಟೆಕ್ನಾಲಜಿ ಪಾರ್ಕ್ನ ಅವಶ್ಯಕತೆ ಇತ್ತು ಅದು ಈಗ ಸಾಕಾರಗೊಂಡಿದ್ದು,  ಇಲ್ಲಿ ಸಂಸ್ಕರಣಾ ಘಟಕಗಳನ್ನು ಹೆಚ್ಚಿಸಿ ತನ್ಮೂಲಕ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗಲಿದ್ದು ತುಂಗಭದ್ರಾ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿನ ಪ್ರದೇಶದಲ್ಲಿ ಉತ್ಪತ್ತಿಯಾಗುವ ಭತ್ತವನ್ನು ಇಲ್ಲಿಯೇ ಸಂಸ್ಕರಿಸಿ, ಮೌಲ್ಯವರ್ಧನೆ ಮಾಡಿ ಬೇರೆಡೆಗೆ ಸಾಗಿಸಲು ಅನುಕೂಲವಾಗುತ್ತದೆ. ಭತ್ತದಿಂದ ಉಪ ಉತ್ಪನ್ನಗಳು ಮತ್ತು ಇತರೆ ವಿದ್ಯುತ್, ಆಲ್ಕೊಹಾಲ್ ಉತ್ಪಾದನೆ ಮುಂತಾದ ಅನುಷಂಗಿಕ ಉದ್ಯಮಗಳಿಗೆ ಉತ್ತೇಜನವಾಗಲಿದೆ ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಸಂಸದರಾದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು, ಜಂಟಿ ಕೃಷಿ ನಿರ್ದೇಶಕಿ ಶಬಾನಾ ಎಂ. ಶೇಖ್, ಕಾರಟಗಿ ತಹಶೀಲ್ದಾರ್ ಕವಿತಾ ಆರ್., ರೈಸ್ ಟೆಕ್ನಾಲಜಿ ಪಾರ್ಕ್ನ ಕಾರ್ಯದರ್ಶಿ ಕುಮಾರಸ್ವಾಮಿ ಹಾಗೂ ಮಾರ್ಕೆಟಿಂಗ್ ವಿಭಾಗದ ಬಸವರಾಜ, ಕಾರಟಗಿ ವಿಶೇಷ ಎಪಿಎಂಸಿ ಅಧ್ಯಕ್ಷ ಶರಣಪ್ಪ ಭಾವಿ, ಎಪಿಎಂಸಿ ಕಾರ್ಯದರ್ಶಿ ಡಾ. ಶ್ಯಾಮ್ ಸೇರಿದಂತೆ ಎಪಿಎಂಸಿಯ ಸದಸ್ಯರು, ರೈತಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು

Please follow and like us:
error