ಲಸಿಕೆಗಾಗಿ ಹೆಸರು ನೋಂದಾಯಿಸಲು ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಸೂಚನೆ

ಕೊಪ್ಪಳ,  : ಕೋವಿಡ್-19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿರುವ ಎಲ್ಲಾ 18 ವರ್ಷ ಮೇಲ್ಪಟ್ಟ ವಿಕಲಚೇತನರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೋವಿಡ್-19ಗೆ ಸಂಬAಧಿಸಿದ ವ್ಯಾಕ್ಸಿನ್ ಹಾಕಿಸಿಕೊಳ್ಳುವುದು ಅಗತ್ಯವಿದ್ದು, ಲಸಿಕೆಗಾಗಿ ಹೆಸರು ನೋಂದಾಯಿಸಿಕೊಳ್ಳುವAತೆ ಸೂಚಿಸಲಾಗಿದೆ.
ಜಿಲ್ಲೆಯಲ್ಲಿರುವ ಎಲ್ಲಾ 18 ವರ್ಷ ಮೇಲ್ಪಟ್ಟ ವಿಕಲಚೇತನರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ   Co-WIN App     ಅಥವಾ  www.cowin.gov.in    ಮೂಲಕ ತಮ್ಮ ಹೆಸರು ನೋಂದಾಯಿಸಿಕೊAಡು, ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ. ಹಾಗೂ ಲಸಿಕಾ ಕೇಂದ್ರಗಳಲ್ಲಿ ಎಲ್ಲಾ 18 ವರ್ಷ ಮೇಲ್ಪಟ್ಟ ವಿಕಲಚೇತನರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೋವಿಡ್ ವಾಕ್ಸಿನೇಷನ್ ನೀಡುವುದಕ್ಕೆ ಆದ್ಯತೆ ಮೇರೆಗೆ ಕಾರ್ಯವಿಧಾನ ರೂಪಿಸಿ ಅಂತಹವರನ್ನು ವಾಕ್ಸಿನೇಷನ್‌ಗಾಗಿ ಸರತಿಸಾಲಿನಲ್ಲಿ ಕಾಯಿಸುವಂತಿಲ್ಲ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನಲ್ಲಿ ತಾಲ್ಲೂಕು ನೋಡಲ್ ಅಧಿಕಾರಿಗಳಾಗಿ ನೇಮಿಸಿರುವ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹಿರಿಯ ಮೇಲ್ವಿಚಾರಕರು, ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಕೊಪ್ಪಳ ಇಲಾಖೆಯಿಂದ ನೇಮಿಸಿರುವ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಪ್ರತಿ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ಮ್ನ ಸಂಪರ್ಕಿಸಬೇಕು.
ಎAಆರ್‌ಡಬ್ಲೂö್ಯಗಳಾದ ಕೊಪ್ಪಳ ತಾಲ್ಲೂಕಿನ ಜಯಶ್ರೀ 9980126391, ಗಂಗಾವತಿ ತಾಲ್ಲೂಕಿನ ಮಂಜುಳಾ 7975398202, ಯಲಬುರ್ಗಾ ತಾಲ್ಲೂಕಿನ ಬಸನಗೌಡ 9964803047, ಕುಷ್ಟಗಿ ತಾಲ್ಲೂಕಿನ ಚಂದ್ರಶೇಖರ್ 9916308585 ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಮಾಹಿತಿ ಸಲಹಾ ಕೇಂದ್ರ, ಕೊಪ್ಪಳದ ಮಾಹಿತಿ ಸಲಹೆಗಾರ ಮಹ್ಮದ್ ರಫೀಕ್ 9742441572, ಅನ್ನಕ್ಕ ಉಪ್ಪಾರ 8095251135, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಯೋಜನಾ ಸಮಾಲೋಚಕರಾದ ಹೀನಾ ಕೌಸರ್ 7619553924, ಆಪ್ತ ಸಮಾಲೋಚಕರಾದ ಮಲ್ಲಿಕಾರ್ಜುನ ಆರೇರ್ 8660794417, ಅನಿತಾ ಜಿ. 7349507769, ದೇವಕಿ ಬಚ್ಚಮ 7337667509 ರವರನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದು ತುರ್ತಾಗಿ ಆದ್ಯತೆ ಮೇರೆಗೆ ಲಸಿಕೆ ಪಡೆಯಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿತಿಳಿಸಿದ್ದಾರೆ.

Please follow and like us:
error