ಲಸಿಕೆಯ ಬೇಡಿಕೆಯ ಕುರಿತು ನಿಖರವಾದ ಮಾಹಿತಿ ನೀಡಿ : ವಿಕಾಸ್ ಕಿಶೋರ್ ಸುರಳ್ಕರ್

ಕೋವಿಡ್-19 ಲಸಿಕೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆ

ಕೊಪ್ಪಳ, : ಕೋವಿಡ್-19 ಲಸಿಕೆಯ ಬೇಡಿಕೆ ಕುರಿತು ನಿಖರವಾದ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಅಗತ್ಯ ಮಾಹಿತಿಯೊಂದಿಗೆ ಭರ್ತಿ ಮಾಡಿ ಅ.31 ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಂಟುAಬ ಇಲಾಖೆಗೆ ನೀಡಬೇಕು ಎಂದು ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ಸಿಡಿಪಿಒ ಗಳಿಗೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೋವಿಡ್-19 ಲಸಿಕೆ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ಪೂರ್ವಸಿದ್ಧತೆ ನಡೆಸುವ ಕುರಿತು ಆಯೋಜಿಸಿದ್ದ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವು ಮುಂಬರುವ ದಿನಗಳಲ್ಲಿ ಕೋವಿಡ್-19 ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಹರಡಿರುವ ಕೋವಿಡ್-19 ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಇದಕ್ಕೆ ಸಂಬAಧಿಸಿದAತೆ ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಆಸ್ಪತ್ರೆಗಳು, ಶಿಶುಅಭಿವೃದ್ಧಿ ಯೋಜನಾಧಿಕಾರಿಗಳು ಲಭ್ಯವಿರುವ ಮಾನವ ಸಂಪನ್ಮೂಲ, ಅಗತ್ಯವಿರುವ ಲಸಿಕೆಯ ಪ್ರಮಾಣ ಮುಂತಾದ ವಿವರಗಳನ್ನು ನಾಳೆ ಮಧ್ಯಾಹ್ನದೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನೀಡಬೇಕು ಎಂದು ಅವರು ಹೇಳಿದರು.
ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಕ್ಕೆ ರೆಫ್ರಿಜರೇಟರ್ ವ್ಯವಸ್ಥೆ ಇರಬೇಕು. ಐ.ಎಂ.ಎ ನಲ್ಲಿ ನೋಂದಣಿಯಾಗಿರುವ ಹಾಗೂ ಕೋವಿಡ್ ಸೌಲಭ್ಯ ಒದಗಿಸುತ್ತಿರುವ ಪ್ರತಿಯೊಂದು ಖಾಸಗಿ ಆಸ್ಪತ್ರೆಯೂ ಅಗತ್ಯ ಮಾಹಿತಿಯನ್ನು ನೀಡಬೇಕು. ನಿಗದಿತ ಅವಧಿಯ ನಂತರ ಯಾವುದೇ ಮಾಹಿತಿ ಒದಗಿಸಲು ಅವಕಾಶವಿಲ್ಲ. ಆದ್ದರಿಂದ ಕೊಪ್ಪಳ ಹಾಗೂ ಗಂಗಾವತಿಯ ಐ.ಎಂ.ಎ ಅಧ್ಯಕ್ಷರು ಈ ಕುರಿತು ತಮ್ಮ ಅಧೀನ ಆಸ್ಪತ್ರೆಗಳಿಗೆ ಸೂಚನೆ ನೀಡಬೇಕು. ಆರೋಗ್ಯ ಇಲಾಖೆಯಿಂದ ನೀಡಿರುವ ನಮೂನೆಯಲ್ಲಿ ಅಗತ್ಯ ಮಾಹಿತಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಜಂಬಯ್ಯ ಮಾತನಾಡಿ, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗಳ ವಿವರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ/ಸಿಬ್ಬಂದಿಗಳ, ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ವಿವರಗಳನ್ನು ನೀಡಲು ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ., ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎಸ್.ಬಿ.ದಾನರೆಡ್ಡಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರನಾಥ ಎಚ್., ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಸವರಾಜ ಕುಂಬಾರ, ಕೊಪ್ಪಳ ಐ.ಎಂ.ಎ ಅಧ್ಯಕ್ಷ ಡಾ.ಸುಶೀಲ್‌ಕುಮಾರ ಕೆ., ಗಂಗಾವತಿಯ ಐ.ಎಂ.ಎ. ಕಾರ್ಯದರ್ಶಿ ಡಾ. ಬಸವರಾಜ ಎಸ್., ಡಾ. ಮಹೇಶ ಎಂ.ಜಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ ಸೇರಿದಂತೆ ಕೊಪ್ಪಳ ಹಾಗೂ ಗಂಗಾವತಿ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಚಾರ್ಯರು, ಐ.ಡಿ.ಎ. ಅಧ್ಯಕ್ಷರು, ವಿವಿಧ ತಾಲ್ಲೂಕುಗಳ ಶಿಶುಅಭಿವೃದ್ಧಿ ಯೋಜನಾಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error