ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ : ನಿಲ್ದಾಣಗಳಲ್ಲಿ ಕೌಂಟರ್ ವ್ಯವಸ್ಥೆ

ಕೊಪ್ಪಳ, ಜೂ. ೨೦: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದ ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್‌ಗಳನ್ನು ಒದಗಿಸಲು ವಿಭಾಗದ ವಿವಿಧ ನಿಲ್ದಾಣಗಳಲ್ಲಿ ಕೌಂಟರ್ ವ್ಯವಸ್ಥೆಯನ್ನು ಮಾಡಲಾಗಿದೆ.
೨೦೧೯-೨೦ನೇ ಶೈಕ್ಷಣಿಕ ವರ್ಷಕ್ಕೆ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್‌ಗಳನ್ನು ನೀಡಲು ಈ.ಕ.ರ.ಸಾ.ಸಂಸ್ಥೆ ಕೊಪ್ಪಳ ವಿಭಾಗ ವ್ಯಾಪ್ತಿಯ ಕೊಪ್ಪಳ, ಅಳವಂಡಿ, ಕುಷ್ಟಗಿ, ಹನುಮಸಾಗರ, ತಾವರಗೇರಾ, ಯಲಬುರ್ಗಾ, ಮಂಗಳೂರು, ಗಂಗಾವತಿ, ಸಿದ್ದಾಪುರ, ಕನಕಗಿರಿ, ಬನ್ನಿಕೊಪ್ಪ, ಕುಕನೂರು ಬಸ್ ನಿಲ್ದಾಣಗಳಲ್ಲಿ ಪಾಸ್ ಕೌಂಟರ್‌ಗಳನ್ನು ಸ್ಥಾಪಿಸಲಾಗಿದ್ದು, ಈ ಪಾಸ್ ಕೌಂಟರ್‌ಗಳಲ್ಲಿ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸುಗಳನ್ನು ಬೆಳಿಗ್ಗೆ ೦೮ ರಿಂದ ಸಾಯಂಕಾಲ ೦೫ ಗಂಟೆಯ ವರೆಗೆ ವಿತರಿಸುವ ವ್ಯವಸ್ಥೆ ಮಾಡಲಾಗಿರುತ್ತದೆ. ಆದ್ದರಿಂದ ಜಿಲ್ಲೆಯ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಈ.ಕರ.ಸಾ. ಸಂಸ್ಥೆ. ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Please follow and like us:
error