ವಿದ್ಯುತ್ ಬಿಲ್ ಮನ್ನಾ ಮತ್ತು ವಿದ್ಯುತ್ ಬಿಲ್ ಸರಿಪಡಿಸಲು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹ

Koppal : ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್-೧೯ ತಡೆಯುವ ನಿಟ್ಟಿನಲ್ಲಿ ಜಾರಿಯಾದ ಲಾಕ್‌ಡೌನ್ ಆದೇಶದಿಂದ ಜನರು ಸಂಕಷ್ಟದಲ್ಲಿ ಇದ್ದಾರೆ. ನಿರ್ದಿಷ್ಟ ಆದಾಯವಿಲ್ಲದೇ ತುಂಬ ತೊಂದರೆಯಲ್ಲಿ ಇದ್ದಾರೆ, ಈ ಸಂಕಷ್ಟದ ಸಮಯದಲ್ಲಿ ಜೀವನ ನಡೆಸುವುದೇ ಕಷ್ಟವಾಗಿದೆ ಇಂತಹ ಸಂದರ್ಭದಲ್ಲಿ ಜನರಿಗೆ ವಿದ್ಯುತ್ ಬಿಲ್ ಪಾವತಿಸುವುದು ಕಷ್ಟ. ಆದಕಾರಣ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕೊಪ್ಪಳ ಜಿಲ್ಲಾ ಘಟಕವು ಸರ್ಕಾರಕ್ಕೆ ಆಗ್ರಹಿಸುವುದೇನೆಂದರೆ,
ಬಿ.ಪಿ.ಎಲ್. ಕಾರ್ಡ್ ಮತ್ತು ಮಧ್ಯಮ ವರ್ಗದವರಿಗೆ ೩ ತಿಂಗಳ ವಿದ್ಯುತ್ ಬಿಲ್ ಸಂಪೂರ್ಣ ಮನ್ನಾ ಮಾಡಬೇಕು. ಬಿಲ್ ಪಾವತಿಸಲು ಸಮಯ ಅವಕಾಶವನ್ನು ನೀಡಬೇಕು. ಅವೈಜ್ಞಾನಿಕ ವಿದ್ಯುತ್ ಬಿಲ್‌ಗಳನ್ನು ಹಿಂಪಡೆಯಬೇಕು.

ಆದ್ದರಿಂದ ನಮ್ಮ ಈ ಬೇಡಿಕೆಗಳು ನ್ಯಾಯಯುತವಾಗಿದ್ದು, ಸರ್ಕಾರ ಸಾಮಾಜಿಕ ಬದ್ಧತೆ ಪ್ರದರ್ಶಿಸಬೇಕು. ಮಾನವೀಯ ದೃಷ್ಠಿಯಿಂದ ಪರಿಶೀಲಿಸಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕೊಪ್ಪಳ ಜಿಲ್ಲಾ ಘಟಕ ಅಗ್ರಹಿಸುತ್ತದೆ.  ಜಿಲ್ಲಾಧಿಕಾರಿಗಳ ಪರವಾಗಿ   ಹೇಮಂತ್‌ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷರು ಆದಿಲ್ ಪಟೇಲ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅಲೀಮುದ್ದೀನ್, ಜಿಲ್ಲಾ ಕಾರ್ಮಿಕರ ಘಟಕ ಅಧ್ಯಕ್ಷರು ಮೌಲಾಹುಸೇನ್ ಹಣಗಿ ಮತ್ತಿತರರು ಉಪಸ್ಥಿತರಿದ್ದರು.

Please follow and like us:
error