ಶ್ರೀಗಳ ಲಿಂಗೈಕ್ಯ ಹಿನ್ನೆಲೆ ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ತುಮಕೂರು :ತುಮಕೂರಿನ ಸಿದ್ದಗಂಗಾ ಶ್ರೀಗಳು ಲಿಂಗೈಕ್ಯ ಹಿನ್ನೆಲೆ ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಸರಕಾರ. 3 ದಿನದ ಶೋಕಾರಚಣೆ ಮಾಡಲು ಆದೇಶ  ನೀಡಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಶ್ರೀಗಳ ಲಿಂಗೈಕ್ಯರಾದ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು ಶೋಕಾಚರಣೆಯ ಬಗ್ಗೆ ಮಾಹಿತಿ ನೀಡಿದರು.

ಸಿದ್ಧಗಂಗಾ ಮಠದ ಆವರಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಾಡಿನ ಜನತೆಯ ಹೃಯದಲ್ಲಿ ನಡೆದಾಡುವ ದೇವರು ಎಂದೇ ಸ್ಥಾನ ಪಡೆದಿರುವ ಪರಮಪೂಜ್ಯ ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾದರು’ ಎಂದು ವೈದ್ಯರು ನೀಡಿರುವ ಮಾಹಿತಿ ಆಧರಿಸಿ ಅಧಿಕೃತವಾಗಿ ಘೋಷಿಸಿದರು.