ಸಂವಿಧಾನದ ಪೀಠಿಕೆ ಓದುವುದರ ಮೂಲಕ “ಸಂವಿಧಾನ ದಿನ” ಆಚರಣೆ


ಕೊಪ್ಪಳ, : : ಸಂವಿಧಾನ ದಿಣಾಚರಣೆಯ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸಂವಿಧಾನದ ಪೀಠಿಕೆ (Preamble)    ಯನ್ನು ಓದುವುದರ ಮೂಲಕ ಸಂವಿಧಾನ ದಿನವನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿಗಳಾದ ವಿಕಾಸ್ ಕಿಶೋರ್ ಸುರಳ್ಕರ್ ಹಾಗೂ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ಸಂವಿಧಾನದ ಪೀಠಿಕೆ(Preamble) ಯನ್ನು ಬೋಧಿಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error