ಸರಳವಾಗಿ ಜನರಿಗೆ ಮರಳು ಒದಗಿಸುವುದು ಸರ್ಕಾರದ ಗುರಿ : ಸಿ.ಸಿ ಪಾಟೀಲ


ಕೊಪ್ಪಳ ಸೆ.   ಪ್ರತಿಯೊಂದು ಜನರಿಗೆ ಮರಳು ಸುಲಲಿತವಾಗಿ ತಲುಪುವಂತೆ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ ಪಾಟೀಲ ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಡವರು, ಸಾರ್ವಜನಿಕರು ಮನೆ  ಹಾಗೂ ಕಟ್ಟಡ ಕಟ್ಟಿಸಿಕೊಳ್ಳಲು ಸುಲಭವಾಗಿ ಮರಳು ಲಭ್ಯವಾಗುವಂತೆ ಮಾಡಲು ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು.  ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಇದರ ಜೊತೆ ಜೊತೆಗೆ ಸಾರ್ವಜನಿಕರಿಗೆ ಮರಳು ಸುಲಭವಾಗಿ ಲಭ್ಯವಾಗುವಂತೆ ಮಾಡಬೇಕಿದೆ.  ಸರ್ಕಾರದ ಯಾವುದೇ ಕಾರ್ಯಕ್ರಮಗಳು ಮಂದಗತಿಯಲ್ಲಿ ಸಾಗಬಾರದು.  ಅಕ್ರಮ ಗಣಿ ಮತ್ತು ಮರಳು ಸಾಗಾಣಿಕೆ ನಿಯಂತ್ರಣಕ್ಕೆ ಮೈನಿಂಗ್, ಕಂದಾಯ, ಅರಣ್ಯ ಹಾಗೂ ಪೊಲೀಸ್ ಇಲಾಖೆಯವರು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು.  ಮರಳು ಗಣಿಗಾರಿಕೆಯನ್ನು ಸುಗಮಗೊಳಿಸಲು ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.  ಕೊಪ್ಪಳ ಜಿಲ್ಲೆಯನ್ನು ಆದ್ಯತೆಯ ಮೇಲೆ ಪರಿಗಣಿಸಿದ್ದು, ಗಣಿಗಾರಿಕೆ ಮತ್ತು ಮರಳುಗಾರಿಕೆಯಲ್ಲಿ ಆದಷ್ಟು ಬೇಗನೆ ಪಾರದರ್ಶಕತೆ ತರಲು ಪ್ರಯತ್ನಿಸಲಾಗುತ್ತಿದೆ.  ಕಾನೂನು ಬಾಹೀರವಾಗಿ ಗಣಿ ಮತ್ತು ಮರಳು ಸಾಗಾಣಿಕೆ ಮಾಡುವವರ ವಿರುದ್ಧ ನಿರ್ಧಾಕ್ಷಿÃಣ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರೈಲ್ವೆ ಹಾಗೂ ರಾಷ್ಟಿçÃಯ ಹೆದ್ದಾರಿ ಕಾಮಗಾರಿಗಳು ಕೇಂದ್ರ ಸರ್ಕಾರದ ಕಾಮಗಾರಿಗಳು ಆಗಿರುವುದರಿಂದ.  ಈ ಎಲ್ಲಾ ಕಾಮಗಾರಿಗಳು ಅತೀ ದೊಡ್ಡ ಯೋಜನೆಗಳದ್ದಾಗಿವೆ.  ಈ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಇವುಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರು ಮಾತನಾಡಿ, ಜಿಲ್ಲೆಯ ಗ್ರಾö್ಯನೇಟ್ ಉದ್ಯಮ ಸಂಕಷ್ಟದಲ್ಲಿದೆ ರಾಜ್ಯ ಸರ್ಕಾರದಿಂದ ಇದಕ್ಕೆ ಅನುಕೂಲವಾಗುವ ರೀತಿಯಲ್ಲಿ ಹೊಸದೊಂದು ಯೋಜನೆ ರೂಪಿಸುವಂತೆ ಕೇಳಿಕೊಂಡರು.
ಸಭೆಯಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ ಮೂರ್ತಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶ್‌ಪಾಲ ಕ್ಷಿÃರಸಾಗರ, ಪ್ರೊಬೇಷನರಿ ಐಎಎಸ್ ಅಧಿಕಾರಿ ನೇಹಾ ಜೈನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು.
ಲಿಫ್ಟ್ ಉದ್ಘಾಟನೆ;
ಕೊಪ್ಪಳ ಜಿಲ್ಲಾಡಳಿತ ಭವನಕ್ಕೆ ಬರುವ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರಿಗೆ ಜಿಲ್ಲಾಧಿಕಾರಿ ಹಾಗೂ ಮೊದಲನೇ ಮಹಡಿಯ ಕಚೇರಿಗಳಿಗೆ ಭೇಟಿಗೆ ಅನುಕೂಲವಾಗಲು ಜಿಲ್ಲಾಡಳಿತ ಭವನದಲ್ಲಿ ಸ್ಥಾಪಿಸಲಾದ ಲಿಫ್ಟ್ನ್ನು ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ ಪಾಟೀಲ ಅವರು ವಿಕಲಚೇತನ ಯುವತಿಯಿಂದ ಉದ್ಘಾಟಿಸಿದರು.  ಇದೇ ಸಂದರ್ಭದಲ್ಲಿ  ಸಂಸದ ಕರಡಿ ಸಂಗಣ್ಣ, ಶಾಸಕ ಹಾಲಪ್ಪ ಆಚಾರ್, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Please follow and like us:
error

Related posts