ಸರ್ಕಾರದ ಹಣ ದುರುಪಯೋಗ ಪಡಿಸಿಕೊಂಡ ಆರೋಪಿತರ ಜಾಮೀನು ಅರ್ಜಿ ತಿರಸ್ಕೃತ

ಕೊಪ್ಪಳ, : ಕೊಪ್ಪಳ ಸೈಬರ್ ಪೋಲಿಸ್ ಠಾಣೆ ವ್ಯಾಪ್ತಿಯ ಅಗಳಕೇರಾ ಗ್ರಾಮ ಪಂಚಾಯಿತಿ ಪಿಡಿಓ ಗೌಸುಸಾಬ್ ಮುಲ್ಲಾ ಹಾಗೂ ಕಂಪ್ಯೂಟರ್ ಆಪರೇಟರ್ ಸುಮನ್ ಸಿಂಧೋಗಿ ಇವರು ಅಗಳಕೇರಾ ಗ್ರಾಮ ಪಂಚಾಯಿತಿಗೆ ವಿವಿಧ ಕಾಮಗಾರಿಗಳಿಗೆ ಮಂಜೂರಾದ ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿಯಲ್ಲಿನ ಆರೋಪಿತರ ಜಾಮೀನು ಅರ್ಜಿಯ ವಿಚಾರಣೆ ನಂತರ ಪ್ರಧಾನ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಮನು ಶರ್ಮಾ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಅಗಳಕೇರಾ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದ ಸುಮನ್ ಸಿಂಧೋಗಿ ಹಾಗೂ ಪಿಡಿಓ ಗೌಸುಸಾಬ್ ಮುಲ್ಲಾ ಇವರು 2014-15 ನೇ ಹಣಕಾಸು ಯೋಜನೆ ಅಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಮಂಜೂರಾದ ಸರ್ಕಾರದ ಹಣ ರೂ. 29,42,500/- ಗಳನ್ನು ದುರುಪಯೋಗ ಪಡಿಸಿಕೊಂಡಿರುವುದಾಗಿ ಫಿರ್ಯಾದಿದಾರರು ನೀಡಿದ ದೂರಿನ ಮೇರೆಗೆ ಕೊಪ್ಪಳ ಸೈಬರ್ ಪೋಲಿಸರು ಠಾಣೆ ಗುನ್ನೆ ನಂ 08/2021 ಕಲಂ. 409, 420 ಐಪಿಸಿ ಅಡಿಯಲ್ಲಿ ಗುನ್ನೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ವೆಂಕಟೇಶ ವಿ.ಎ. ಅವರು ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

Please follow and like us:
error