ಸರ್ಕಾರಿ ಅಧಿಕಾರಿ, ನೌಕರರು ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಿ: ಎಡಿಸಿ

ಕೊಪ್ಪಳ: ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಅಧೀನ ನಿಗಮ ಮಂಡಳಿಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಅವರು ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಎಲ್ಲ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಅಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿ ಕಡ್ಡಾಯವಾಗಿ ಧರಿಸುವಂತೆ ಆದೇಶಿಸಿದ್ದರೂ ಕೂಡ ಕೆಲವು ಕಚೇರಿಗಳಲ್ಲಿ ನೌಕರರು ಗುರುತಿನ ಚೀಟಿ ಧರಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಇದರಿಂದ ಸಾರ್ವಜನಿಕರಿಗೆ ನಿರ್ದಿಷ್ಟ ಅಧಿಕಾರಿಗಳು, ಸಿಬ್ಬಂದಿಗಳನ್ನು ಗುರುತಿಸಿ ಭೇಟಿಯಾಗಲು ಕಷ್ಟವಾಗುತ್ತಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ಹಾಗೂ ಸರ್ಕಾರದ ಅಧೀನ ನಿಗಮ ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು.
ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿರುವ ತಪಾಸಣೆ ತಂಡದ ಮೂಲಕ ಗುರುತಿನ ಚೀಟಿ ಧರಿಸದವರನ್ನು ಪತ್ತೆಹಚ್ಚಿ ಬಿಗಿಕ್ರಮ ಕೈಗೊಳ್ಳಲು ತಿಳಿಸಿದ್ದು, ಕಾರಣ ಎಲ್ಲ ಕಚೇರಿಗಳ ಅಧಿಕಾರಿ, ನೌಕರರು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Please follow and like us:
error