ಕೊಪ್ಪಳದಲ್ಲಿ ಪ್ರಗತಿಪರರ ಮೇಲೆ ಕೇಸ್ ಹಾಕಿರುವುದನ್ನು ಖಂಡಿಸುತ್ತೇನೆ. ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇರುವ ಯಾವ ಸರ್ಕಾರವೂ ಈ ರೀತಿ ಮಾಡುವುದಿಲ್ಲ. ಜನರ ಧ್ವನಿಯನ್ನು ಹತ್ತಿಕ್ಕುವುದು ಸರ್ವಾಧಿಕಾರಿ ಧೋರಣೆಯಾಗುತ್ತದೆ. ಸರ್ಕಾರ ತನ್ನ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಕೊಪ್ಪಳದ ಈಶ್ವರ ಪಾರ್ಕನಲ್ಲಿ ಇತ್ತೀಚಿಗೆ ಪ್ರಗತಿಪರ ಸಂಘಟನೆಗಳವರು ಪ್ರತಿಭಟನೆ ಮಾಡಿದ್ದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 13 ಜನರ ಮೇಲೆ ನಗರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡುತಾವು ಪ್ರತಿಭಟನೆ ಮಾಡಿದರೂ ಸಹ ಪೋಲಿಸರು ವಿನಾಕಾರಣ ತಮ್ಮ ಮೇಲೆ ಪ್ರಕರಣ ದಾಖಲು ಮಾಡಿದ್ದಾರೆ. ಕೂಡಲೇ ಅದನ್ನು ಕೈಬಿಡಬೇಕು ಎಂದು ಹೋರಾಟಗಾರರು ಒತ್ತಾಯಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ನಿನ್ನೆ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಪತ್ರಿಕಾಗೋಷ್ಠಿಯಲ್ಲಿ ಇದರ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದಾರೆ
ಕೊಪ್ಪಳದಲ್ಲಿ ಪ್ರಗತಿಪರರ ಮೇಲೆ ಕೇಸ್ ಹಾಕಿರುವುದನ್ನು ಖಂಡಿಸುತ್ತೇನೆ. ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇರುವ ಯಾವ ಸರ್ಕಾರವೂ ಈ ರೀತಿ ಮಾಡುವುದಿಲ್ಲ. ಜನರ ಧ್ವನಿಯನ್ನು ಹತ್ತಿಕ್ಕುವುದು ಸರ್ವಾಧಿಕಾರಿ ಧೋರಣೆಯಾಗುತ್ತದೆ. ಸರ್ಕಾರ ತನ್ನ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸುತ್ತೇನೆ. 4/4#KarnatakaPolitics
— Siddaramaiah (@siddaramaiah) June 3, 2020