ಸಹಕಾರ ಕ್ಷೇತ್ರದ ಬಲವರ್ಧನೆಯಿಂದ ದೇಶದ ಆರ್ಥಿಕತೆಗೆ ಲಾಭದಾಯಕ- ಡಾ. ಶೇಖರಗೌಡ ಮಾಲಿಪಾಟೀಲ.

ಕೊಪ್ಪಳ, ೦೬ಃ- ಹಾಲು ಉತ್ಪಾದಕರ ಸಹಕಾರ ಸಂಘಗಳು ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹಳ್ಳಿಯ ಜನರು ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಉಪಕಸಬನ್ನಾಗಿ ಮಾಡಿಕೊಂಡು ಅಭಿವೃದ್ಧಿಯತ್ತ ಸಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಹಕಾರ ಕ್ಷೇತ್ರವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸಿದಲ್ಲಿ ದೇಶದ ಆರ್ಥಿಕತೆಗೆ ತುಂಬಾ ಲಾಭದಾಯಕವೆಂದು ಜಿಲ್ಲಾ ಸಹಕಾರ ಯೂನಿಯನ್ನಿನ ಅಧ್ಯಕ್ಷರಾದ ಡಾ. ಶೇಖರಗೌಡ ಮಾಲಿಪಾಟೀಲ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಮಾತನಾಡಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನಿ., ಕೊಪ್ಪಳ ಹಾಗೂ ಸಹಕಾರ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕಃ ೦೬-೦೩-೨೦೨೦ ರಂದು ಶ್ರೀಮತಿ ಭಾಗ್ಯಮ್ಮ ಭೀಮಶೇನಪ್ಪ ಪಾನಗಂಟಿ ಮಂಗಲ ಭವನ, ಭಾಗ್ಯನಗರ-ಕೊಪ್ಪಳದಲ್ಲಿ ಜರುಗಿದ ರಾಜ್ಯ ಮಟ್ಟದ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಾಹಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಶಿವಪ್ಪ ವಾದಿ ರವರು ಉದ್ಘಾಟಿಸಿ, ತಮ್ಮ ಉದ್ಘಾಟನಾ ಭಾಷಣದಲ್ಲಿ ತರಬೇತಿಯು ನಿರಂತರ ಪ್ರಕ್ರಿಯೆಯಾಗಿದ್ದು ಜಿಲ್ಲಾ ಸಹಕಾರ ಯೂನಿಯನ್ ಅನೇಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ಇಂಥಹ ತರಬೇತಿಯ ಪ್ರಯೋಜನವನ್ನು ಪಡೆಯಬೇಕೆಂದು ಕರೆನೀಡಿದರು.
ಕಾರ್ಯಕ್ರಮವನ್ನುದ್ದೇಶಿಸಿ ಮುಖ್ಯಅತಿಥಿಗಳಾದ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನಿರ್ದೇಶಕರಾದ ವೆಂಕನಗೌಡ ಹಿರೇಗೌಡರ್, ಸಹಕಾರ ಸಹಾಯಕ ನಿಬಂಧಕರಾದ ಬಿ.ಎ. ಕೇಸರಿಮಠ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷರಾದ ತೋಟಪ್ಪ ಕಾಮನೂರು, ನಿರ್ದೇಶಕರುಗಳಾದ ಶ್ರೀಮತಿ ಶಕುಂತಲಾ ಹೆಚ್. ಹುಡೇಜಾಲಿ, ಮಾರುತಿ ಅಂಗಡಿ, ಅಮರೇಶ ಉಪಲಾಪೂರ, ಶ್ರೀಮತಿ ಸಾವಿತ್ರಮ್ಮ ಮಲ್ಲಪ್ಪ ಮತ್ತು ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಬುಕ್ಕಾ ಮಲ್ಲಿಕಾರ್ಜುನ, ಸಹಕಾರ ತರಬೇತಿ ಕೇಂದ್ರದ ನಿವೃತ್ತ ಪ್ರಾಂಶುಪಾಲರಾದ ಎಂ.ಜಿ. ಪಾಟೀಲ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಉಪವ್ಯವಸ್ಥಾಪಕರಾದ ಜಿ.ಐ. ಪಡಸಲಗಿ, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ, ಶರಣಬಸಪ್ಪ ಕಾಟ್ರಳ್ಳಿ, ಇವರುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶ್ರೀಮತಿ ರಾಜ್ಮಾ ರವರು ಪ್ರಾರ್ಥಿಸಿದರು. ಜಿಲ್ಲಾ ಸಹಕಾರ ಯೂನಿಯನ್ನಿನ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ, ಶರಣಬಸಪ್ಪ ಕಾಟ್ರಳ್ಳಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿ ನಿರೂಪಿಸಿದರು. ಕೊನೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ನಿನ ಉಪಾಧ್ಯಕ್ಷರಾದ ತೋಟಪ್ಪ ಕಾಮನೂರು ರವರು ವಂದಿಸಿದರು.

Please follow and like us:
error