You are here
Home > Koppal News > ಸೇನಾ ನೇಮಕಾತಿ ರ್‍ಯಾಲಿ : ಡಿ. ೦೫ ರಿಂದ ಕೊಪ್ಪಳದಲ್ಲಿ ಯುವಕರಿಗೆ ತರಬೇತಿ ಶಿಬಿರ

ಸೇನಾ ನೇಮಕಾತಿ ರ್‍ಯಾಲಿ : ಡಿ. ೦೫ ರಿಂದ ಕೊಪ್ಪಳದಲ್ಲಿ ಯುವಕರಿಗೆ ತರಬೇತಿ ಶಿಬಿರ

ಕೊಪ್ಪಳ ಡಿ.  : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಭಾರತೀಯ ಸೇನಾ ನೇಮಕಾತಿ ರ್‍ಯಾಲಿಗೆ ಕೊಪ್ಪಳ ಜಿಲ್ಲೆಯ ಯುವಕರಿಗೆ “ಉಚಿತ ತರಬೇತಿ ಶಿಬಿರ” ಡಿ. ೦೫ ರಿಂದ ೦೮ ರವರೆಗೆ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭವನ್ನು ಡಿ. ೦೫ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ನಗರದ ಮಳೆಮಲ್ಲೇಶ್ವರ ದೇವಸ್ಥಾನ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಪ್ರಭಾರ ಅಧ್ಯಕ್ಷರು ಆಗಿರುವ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಚೆನ್ನುಪಾಟಿ ಪ್ರಭಾಕರ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಡಾ. ಚಂದ್ರಶೇಖರ ಬಿ. ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಚಂಡೂರು ಹನುಮಂತಗೌಡ ಪಾಟೀಲ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಉಮಾ ಮಹದೇವನ್ ಹಾಗೂ ಜಿ.ಪಂ., ತಾ.ಪಂ. ಸರ್ವ ಸದಸ್ಯರು ಪಾಲ್ಗೊಳ್ಳುವರು ,

Top