ಸೋಂಕಿತರ ಸಂಪರ್ಕಿತರನ್ನು ಬೇಗನೆ ಪತ್ತೆ_ಹಚ್ಚಿ: ವಿ.ರಶ್ಮಿ ಮಹೇಶ


ಕೊಪ್ಪಳ,  #ಕೋವಿಡ್-19 ಪಾಸಿಟಿವ್ ವ್ಯಕ್ತಿಗಳ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಬೇಗನೆ ಪತ್ತೆ ಹಚ್ಚಿ ಸೋಂಕು ಹರಡುವಿಕೆಯನ್ನು ನಿಯಂತ್ರಿಸಿ ಎಂದು ಸರ್ಕಾರದ ಕಾರ್ಯದರ್ಶಿ, #ಸಾರ್ವಜನಿಕ ಉದ್ದಿಮೆಗಳ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ #ಜಿಲ್ಲಾಧಿಕಾರಿಗಳಿಗೆ #ಸೂಚನೆ_ನೀಡಿದರು.

#ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕೋವಿಡ್-19 ನಿಯಂತ್ರಣ ಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

#ಸೋಂಕಿತರ ಸಂಪರ್ಕಿತರ ಶೀಘ್ರ ಪತ್ತೆಯಿಂದ ಸೋಂಕು ಹರಡುವಿಕೆಯನ್ನು ನಿಯಂತ್ರಿಸಬಹುದು. ಆದ್ದರಿಂದ ಸಂಪರ್ಕಿತರನ್ನು ಪತ್ತೆ ಹಚ್ಚಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ. ಜಿಲ್ಲೆಯಲ್ಲಿ ಸೋಂಕು ಪತ್ತೆಯಾದ ಆಧಾರದಲ್ಲಿ ಯಾವ ಗುಂಪಿನ, ವಯಸ್ಸಿನ ವ್ಯಕ್ತಿಗಳಲ್ಲಿ ಸೋಂಕು ಹೆಚ್ಚಿದೆ ಎಂದು ವಿಶ್ಲೇಷಿಸಿ ಆ ವಯೋಮಾನದವರ ಆರೋಗ್ಯದ ಮೇಲೆ ನಿಗಾ ಇಡುವಂತೆ ಎಚ್ಚರಿಕೆ ನೀಡಿ.

#ಸಾರ್ವಜನಿಕರಲ್ಲಿ ಮಾಸ್ಕ್ ಧರಿಸುವ ಕುರಿತು ಜಾಗೃತಿ ಮೂಡಿಸಿ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಪಾಡುಕೊಳ್ಳುವಿಕೆ ಮುಂತಾದವುಗಳ ಕುರಿತು ಜಾಗೃತಿ ಕಾರ್ಯಕ್ರಮ ಕೈಗೊಳ್ಳಿ. #ಐಎಲ್‌ಐ ಮತ್ತು ಸಾರಿ ಪ್ರಕರಣಗಳಲ್ಲಿ ಸೋಂಕು ಹೆಚ್ಚಾಗಿ ಕಂಡುಬAದಿದ್ದು, ಈ ಹಿಂದೆ ಐಎಲ್‌ಐ ಮತ್ತು ಸಾರಿ ಪ್ರಕರಣ ಪತ್ತೆ ಕುರಿತು ಜಿಲ್ಲಾಡಳಿತ ಕೈಗೊಂಡ ಸಮೀಕ್ಷೆ ಅನ್ವಯ ಐಎಲ್‌ಐ ಮತ್ತು ಸಾರಿ ಸಮಸ್ಯೆಯಿಂದ ಬಳಲುತ್ತಿರುವವರನ್ನು ಪತ್ತೆ ಹಚ್ಚಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ.

#ಕಂಟೈನ್‌ಮೆAಟ್ ವಲಯಗಳಲ್ಲಿ ಮಾದರಿ ಪರೀಕ್ಷೆಯನ್ನು ಹೆಚ್ಚಿಸಿ. ಗ್ರಾಮೀಣ ಭಾಗದಲ್ಲಿ ಈಗಾಗಲೇ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಂಗ್ರಹಿಸಿದ ಮಾಹಿತಿ ಅನ್ವಯ ಮಾದರಿ ಪರೀಕ್ಷೆ, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ ಎಂದು ಹೇಳಿದರು.

#ಲಾಕ್‌ಡೌನ್ ಘೋಷಣೆ ಮಾಡಿರುವ ಪ್ರದೇಶಗಳಲ್ಲಿ ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತನ್ನಿ. ಪೊಲೀಸ್ ಇಲಾಖೆ ಹೆಚ್ಚಿನ ಬಂದೋಬಸ್ತ್ ಒದಗಿಸಿ, ಸಾರ್ವಜನಿಕರು ಲಾಕ್‌ಡೌನ್ ನಿಯಮ ಪಾಲಿಸುವಂತೆ ಎಚ್ಚರಿಕೆ ನೀಡಿ. ಲಾಕ್‌ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ. ಕ್ವಾರಂಟೈನ್ ನಿಯಮ ಉಲ್ಲಂಘಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಿ. ಅಗತ್ಯವಿದ್ದಲ್ಲಿ ಜಿಲ್ಲೆಯ ಸುಸಜ್ಜಿತ ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಲು ಖಾಸಗಿ ವೈದ್ಯರಿಗೆ ನಿರ್ದೇಶನ ನೀಡಿ ಹಾಗೂ ಖಾಸಗಿ ವೈದ್ಯರು ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಸೇವೆಗೆ ಸಿದ್ಧವಿರುವಂತೆ ಸೂಚನೆ ನೀಡಿ ಎಂದು ಅವರು ಹೇಳಿದರು.

#ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾತನಾಡಿ, ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಮಡ ಕ್ರಮಗಳ ಕುರಿತು ಮಾಹಿತಿ ನೀಡಿದರು.

#ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಜಿ.ಸಂಗೀತಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಿಂಗರಾಜು ಟಿ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎಸ್.ಬಿ.ದಾನರೆಡ್ಡಿ ಸೇರಿದಂತೆ ವಿವೀಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error