ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರಕ್ಕೆ ಮೂಲ ಸೌಕರ್ಯ ನೀಡಿ : ಪಿ. ಸುನೀಲ್ ಕುಮಾರ

ಕೊಪ್ಪಳ ಸೆ. : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರಕ್ಕೆ ಅಗತ್ಯವಾದ ಗೋಡೆ ಆವರಣ, ಸಮರ್ಪಕ ರಸ್ತೆ ಮುಂತಾದ ಮೂಲಭೂತ ಸೌಕರ್ಯಗಳ ಕುರಿತು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕೇಂದ್ರದ 18ನೇ ವಾರ್ಷಿಕ ಮಹಾಸಭೆಯನ್ನು ಉದ್ದೆÃಶಿಸಿ ಅವರು ಮಾತನಾಡಿದರು.
ಶಿಸ್ತು ಮತ್ತು ದೇಶ ಸೇವೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಶಿಕ್ಷಕರಿಗೆ ತರಬೇತಿ ನೀಡಲು ಸಮಯಾವಕಾಶದ ಅನುಕೂಲದ ಅನುಸಾರ ದಿನಾಂಕ ನಿಗದಿ ಪಡಿಸಿ ತರಬೇತಿ ನೀಡಿ. ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಕ್ಕೆ ತೊಂದರೆ ಉಂಟಾಗದಂತೆ ವೇಳಾಪಟ್ಟಿ ಸಿದ್ಧ ಪಡಿಸಿ. ನಂತರ ಸಂಬಂಧಿಸಿದ ಶಿಕ್ಷಕರು ತಮ್ಮ ಶಾಲೆಯಲ್ಲಿ ಆಸಕ್ತಿ ಇರುವ ಮಕ್ಕಳನ್ನು ಗುರುತಿಸಿ ಅವರಿಗೂ ತರಬೇತುಗೊಳಿಸಿ. ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಅಭ್ಯರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದಿರುವುದು ಸಂತಸದ ವಿಷಯ. ಉತ್ತಮ ತರಬೇತಿ ನೀಡಲು ಇನ್ನಷ್ಟು ಉತ್ಸಾಹದಿಂದ ಶ್ರಮ ವಹಿಸಿ. ತರಬೇತಿ ಕೇಂದ್ರಕ್ಕೆ ತಲುಪಲು ಇರುವ ರಸ್ತೆ ಅಭಿವೃದ್ಧಿ ಹಾಗೂ ತರಬೇತಿ ಕೇಂದ್ರದ ಆವರಣ ಗೋಡೆ ನಿರ್ಮಾಣ ಕುರಿತು ಎಚ್.ಕೆ.ಡಿ.ಬಿ ಅಡಿ ಅಗತ್ಯವಿರುವ ಅನುದಾನ ಒದಗಿಸುವ ಕುರಿತು ಪರಿಶೀಲಿಸಲಾಗುವುದು. ಸ್ಥಳೀಯ ಶಾಸಕರನ್ನು ಈ ಕುರಿತು ಸಂಪರ್ಕಿಸಲಾಗುವುದು. ಸೆಪ್ಟೆಂಬರ್ 21 ರಂದು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು.
ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತರಾದ ಎಚ್.ಎಂ. ಸಿದ್ದರಾಮಸ್ವಾಮಿ ಮಾತನಾಡಿ ಸಂಸ್ಥೆಯ ದಿನ ನಿತ್ಯದ ಕಾರ್ಯ ಚಟುವಟಿಕೆ ಹಾಗೂ ಶಿಕ್ಷಕರೊಂದಿಗಿನ ತುರ್ತು ಸಭೆ ನಡೆಸಲು ನಗರದಲ್ಲಿ ಕಚೇರಿ ಒದಗಿಸಿ ಕೊಡಲು ಹಾಗೂ ಸಂಸ್ಥೆಗೆ ಆಯ್ಕೆಯಾಗುವ ಬಡ ಶಾಲಾ ಮಕ್ಕಳಿಗೆ ಸಮವಸ್ತç ಒದಗಿಸಲು ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು.
ಜಿಲ್ಲಾ ಸಂಸ್ಥೆಯ ಸಂಘಟಕರಾದ ಮಲ್ಲೆÃಶ್ವರಿ ಜುಜಾರಿ 2018-19ನೇ ಸಾಲಿನಲ್ಲಿ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳ ಕುರಿತು ಹಾಗೂ ಸಂಸ್ಥೆಯ ಅಭ್ಯರ್ಥಿಗಳು ಕೊಡಗು ಜಿಲ್ಲೆ ನೆರೆ ಹಾವಳಿಗೆ ತುತ್ತಾದ ಸಂದರ್ಭ ಪರಿಹಾರ ಕಾರ್ಯಗಳಲ್ಲಿ ಭಾಗವಹಿಸಿದ್ದರ ಕುರಿತು ಮಾಹಿತಿ ನೀಡಿದರು. 2019-20ನೇ ಸಾಲಿನ ಕಾರ್ಯಕ್ರಮಗಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಲ್.ಜಿ. ರಾಟಿಮನಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಅಮಿತಾ ಯರಗೋಳ್ಕರ, ಸ್ಕೌಟ್ಸ್ ಜಿಲ್ಲಾ ಆಯುಕ್ತ ಮಲ್ಲಿಕಾರ್ಜುನ ಚೌಕಿಮಠ, ಗೈಡ್ಸ್ ಜಿಲ್ಲಾ ಆಯುಕ್ತ ಅರುಣ ವಸ್ತçದ, ಖಜಾಂಚಿ ಹನುಮಂತ ರೆಡ್ಡಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.

Please follow and like us:
error

Related posts