ಸ್ವಾತಂತ್ರö್ಯದ ಅಮೃತ ಮಹೋತ್ಸವ ಕಾರ್ಯಕ್ರಮಗಳ ಕುರಿತು ಕ್ರಿಯಾ ಯೋಜನೆ ಸಿದ್ದಪಡಿಸಿ : ಎಂ.ಪಿ.ಮಾರುತಿ

ಕೊಪ್ಪಳ,  : ನಮ್ಮ ದೇಶ ಸ್ವತಂತ್ರಗೊAಡು 75 ವರ್ಷಗಳನ್ನು ಆಚರಿಸುತ್ತಿರುವ ಸ್ಮರಣಾರ್ಥವಾಗಿ ಸ್ವಾತಂತ್ರö್ಯದ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು, ಈ ಕುರಿತು ಹಮ್ಮಿಕೊಳ್ಳಬೇಕಾಗಿರುವ ಕಾರ್ಯಕ್ರಮಗಳ ಬಗ್ಗೆ ಎಲ್ಲಾ ಇಲಾಖೆಗಳು ಕ್ರಿಯಾ ಯೋಜನೆ ಸಿದ್ದಪಡಿಸಿ ಸಲ್ಲಿಸಿ ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಸ್ವಾತಂತ್ರö್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾಗಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶ ಸ್ವತಂತ್ರವಾಗಿ 75 ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ 75 ಸಂಖ್ಯೆಯನ್ನು ಸಾಂಕೇತಿಕವಾಗಿ ಇಟ್ಟುಕೊಂಡು ಕಾರ್ಯಕ್ರಮಗಳನ್ನು ರೂಪಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ರೂಪಿಸಬಹುದಾದ ಕಾರ್ಯಕ್ರಮಗಳು, ಆಯೋಜಿಸಬೇಕಾದ ಸ್ಪರ್ಧೆಗಳು, ಜಾಥಾ, ವಾಕಥಾನ್, ಸೈಕಲ್ ಜಾಥಾ, ಪ್ರಬಂಧ ಸ್ಪರ್ಧೆ, ಕಿರುಚಿತ್ರ, ಕಿರು ನಾಟಕಗಳು, ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಪ್ರತಿ ವಾರ ಒಂದೊAದು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ವಾತಂತ್ರö್ಯ ಹೋರಾಟದ ಬಗ್ಗೆ ಪರಿಚಯ, ಮೌಲ್ಯಗಳ ಬಗ್ಗೆ ಅರಿವು ಮೂಡಿಸಿ ಜನರಲ್ಲಿ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳಲ್ಲಿ ಸ್ವಾತಂತ್ರö್ಯದ ಬಗ್ಗೆ ಜ್ಞಾನ ಹೆಚ್ಚಿಸಬೇಕು ಇದಕ್ಕಾಗಿ ಅವರಿಗೆ ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಬೇಕು, ಶಾಲಾ ಕಾಲೇಜು ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ಹೇಳಿದರು.
ವಿಶ್ವ ಗುರು ಭಾರತ್, ಭಾರತದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆ, ಅನೇಕತೆಯಲ್ಲಿ ಏಕತೆ, ಭಾರತದ ಪ್ರಗತಿ, ಸ್ವಾತಂತ್ರö್ಯದ ನಂತರ, ಭಾರತ 2.0: ಆತ್ಮ ನಿರ್ಭರ ಭಾರತ, ನಾವು ಭಾರತದ ಜನರು, ಸ್ವಾತಂತ್ರö್ಯ 2.0 ಈ ವಿಷಯಗಳ ಕುರಿತು ಅಥವಾ ಕೊಪ್ಪಳ ಜಿಲ್ಲೆಯಲ್ಲಿ ಸ್ವಾತಂತ್ರö್ಯ ಹೋರಾಟಕ್ಕೆ ಸಂಬAಧಿಸಿದ ಐತಿಹಾಸಿಕ ಹಿನ್ನೆಲೆಯುಳ್ಳ ಸ್ಥಳ, ಸ್ವಾತಂತ್ರö್ಯ ಹೋರಾಟಗಾರರು ಮುಂತಾದವುಗಳ ಬಗ್ಗೆಯೂ ಕಿರು ಚಿತ್ರ, ಕಿರು ನಾಟಕಗಳನ್ನು ರಚಿಸಿ ಪ್ರಸ್ತುತ ಪಡಿಸಬಹುದು. ಆದ್ದರಿಂದ ಸಂಬAಧಿಸಿದ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಆಯೋಜಿಸಬಹುದಾದ ಕಾರ್ಯಕ್ರಮಗಳ ಕುರಿತು ಕ್ರಿಯಾ ಯೋಜನೆ ಸಿದ್ದಪಡಿಸಿ ಸಲ್ಲಿಸಿ. ನಂತರದಲ್ಲಿ ಇಲಾಖಾವಾರು ಕಾರ್ಯಕ್ರಮಗಳನ್ನು ಹಂಚಿಕೆ ಮಾಡಿ ಸ್ವಾತಂತ್ರö್ಯದ ಅಮೃತ ಮಹೋತ್ಸವದ ಕುರಿತು ಅಂತಿಮ ಸೂಚನೆ ನೀಡಲಾಗುವುದು ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತನ ಉಪಕಾರ್ಯದರ್ಶಿ ಶರಣಬಸವರಾಜ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಂಗಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಿ.ಬಿ.ಗಡೇದ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ದೊಡ್ಡಬಸಪ್ಪ ನೀರಲಕೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ಬಿ.ದೊಡ್ಡಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನವೀನ್ ಶಿಂತ್ರೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error