ಹನುಮನಹಳ್ಳಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳ ಅವಿರೋಧ ಆಯ್ಕೆ

ಕೊಪ್ಪಳ:- ಕೊಪ್ಪಳ ವಿಧಾನಸಭಾ ಕ್ಷೇತ್ರದ ಹನುಮನಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿ.ಜೆ.ಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾದ ಯಮನೂರಪ್ಪ ಬಗನಾಳ ಶಿವಪ್ಪ ಮುರಡಿ.ಲಕ್ಷ್ಮವ್ವ ಯಮನೂರಪ್ಪ ಬಗನಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಕೊಪ್ಪಳ ಲೋಕಸಭಾ ಸದಸ್ಯರಾದ ಕರಡಿ ಸಂಗಣ್ಣ ಅವರು ಮಾತನಾಡಿ ಪಂಚಾಯತ್ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದು ತುಂಬಾ ಸಂತೋಷವಾಗಿದೆ ಮತ್ತು ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಆಳ್ವಿಕೆಯಲ್ಲಿ ದೇಶ ಬಹಳಷ್ಟು ಅಭಿವೃದ್ಧಿ ಸಾಧಿಸಿದೆ ಮತ್ತು ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರ ಸರ್ಕಾರ ಕೊಪ್ಪಳ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ದಿಯನ್ನು ಮಾಡಲು ಎಲ್ಲಾ ಕೆಲಸಗಳಿಗೆ ಸ್ವಂದನೆ ಮಾಡಿದ್ದಾರೆ.ಕ್ಷೇತ್ರದ ಅಭಿವೃದ್ದಿಯನ್ನು ಮೆಚ್ಚಿದ ಜನರು ಆದ್ದರಿಂದಲೇ  ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಅಭ್ಯರ್ಥಿಗಳು ಸಂಸದರಿಗೆ ಮತ್ತು ಯುವ ಮುಖಂಡರಾದ ಅಮರೇಶ ಕರಡಿ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು 

 ಈ ಸಂದರ್ಭದಲ್ಲಿ ಯುಮನೂರಪ್ಪ ಕುಟ್ಗನಹಳ್ಳಿ,ಗಂಗಪ್ಪ ಹರಿಜನ,ಮುರಳಿಧರ ಭೀಮನೂರು,ಯುಮನೂರಪ್ಪ ವಾಲಿಕಾರ,ಮಜುರಪ್ಪ ಹರಿಜನ ಉಪಸ್ಥಿತರಿದ್ದರು.

Please follow and like us:
error