ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕಾನೂನು ಪದವೀಧರರಿಗೆ ತರಬೇತಿ ಭತ್ಯೆ

ಅಭ್ಯರ್ಥಿಗಳ ಆಯ್ಕೆ ಪಾರದರ್ಶಕವಾಗಿರಲಿ: ಪಿ. ಸುನೀಲ್ ಕುಮಾರ್
ಕೊಪ್ಪಳ ನ.: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕಾನೂನು ಪದವೀಧರರಿಗೆ ನೀಡುವ ತರಬೇತಿ ಭತ್ಯೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಸರ್ಕಾರದ ನಿಯಮಾವಳಿಯನ್ನು ಪಾಲಿಸಿ ಪಾರದರ್ಶಕ ಆಯ್ಕೆ ಪ್ರಕ್ರಿಯೆ ಅನುಸರಿಸಿ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ತರಬೇತಿ ಭತ್ಯೆಗಾಗಿ ಅಭ್ಯರ್ಥಿಗಳ ಆಯ್ಕೆಗಾಗಿ ನಡೆದ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಭ್ಯರ್ಥಿಗಳ ಆಯ್ಕೆಯಲ್ಲಿ ಕಡ್ಡಾಯವಾಗಿ ಸರ್ಕಾರದ ನಿಯಮಾವಳಿಗಳನ್ನು ಪಾಲನೆ ಮಾಡಿ. ಮೀಸಲಾತಿ ಅನುಸಾರ ಮೆರಿಟ್ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ. ಇಲಾಖೆಯಿಂದ ಜಿಲ್ಲೆಗೆ ಹತ್ತು ಭ್ಯರ್ಥಿಗಳ ಆಯ್ಕೆ ಗುರಿಯನ್ನು ನಿಗದಿ ಪಡಿಸಲಾಗಿದೆ. ಅದರಂತೆ ಹತ್ತು ಅಭ್ಯರ್ಥಿಗಳನ್ನು ಮೀಸಲಾತಿ ಹಾಗೂ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿ. ಪ್ರಸಕ್ತ ವರ್ಷ ಹತ್ತು ಸ್ಥಾನಗಳಿಗೆ ಒಟ್ಟು 40 ಅರ್ಜಿಗಳು ಬಂದಿದ್ದು, ಅವುಗಳಲ್ಲಿ ಮೆರಿಟ್ ಹಾಗೂ ಇತರೆ ದಾಖಲೆಗಳನ್ನು ಪರಿಶೀಲಿಸಿ ಹತ್ತು ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಾಲ್ಕು ಸಾವಿರ ರೂ. ಗಳಂತೆ ತರಬೇತಿ ಭತ್ಯೆಯನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಈರಪ್ಪ ಆಶಾಪೂರ, ವಕೀಲರ ಸಂಘದ ಅಧ್ಯಕ್ಷ ಎಚ್.ಎಚ್. ಮುರಡಿ ಸೇರಿದಂತೆ ಆಯ್ಕೆ ಸಮಿತಿ ಸದಸ್ಯರು, ಇತರರು ಉಪಸ್ಥಿತರಿದ್ದರು.

Please follow and like us:
error