ಕೊಪ್ಪಳ, ಕೊಪ್ಪಳ ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಸರ್ಕಾರದ ಆದೇಶದಂತೆ ನವೆಂಬರ್.05 ರಿಂದ ಸಾರ್ವಜನಿಕ ದರ್ಶನಕ್ಕೆ ಮುಕ್ತಗೊಳಿಸಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಕೋವಿಡ್-19 ಕಾರಣದಿಂದಾಗಿ ಮಾರ್ಚ್ 03 ರಿಂದ ನವೆಂಬರ್ 04 ರವರೆಗೆ ದೇವಿಯ ಸಾರ್ವಜನಿಕ ದರ್ಶನವನ್ನು ನಿಷೇಧಿಸಲಾಗಿತ್ತು. ದೇವಸ್ಥಾನ ಭೇಟಿ ಸಂದರ್ಭದಲ್ಲಿ ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಸ್ಯಾನಿಟೈಸರ್ ಮತ್ತು ಸಾಬೂನಿನಿಂದ ಆಗಾಗ ಕೈ ತೊಳೆದುಕೊಳ್ಳಬೇಕು. ಚಿಕ್ಕ ಮಕ್ಕಳಿಗೆ, ವೃದ್ಧರಿಗೆ ಹಾಗೂ ಅನಾರೋಗ್ಯ ಪೀಡಿತರಿಗೆ ದೇವಸ್ಥಾನದ ಪ್ರವೇಶವನ್ನು ನಿಷೇಧಿಸಿದೆ.
ದೇವರ ದರ್ಶನ ಹೊರತುಪಡಿಸಿ ಯಾವುದೇ ಸೇವೆಗೆ ಅವಕಾಶವಿರುವುದಿಲ್ಲ. ದೇವಸ್ಥಾನದಲ್ಲಿ ಭಕ್ತರು ಉಳಿದುಕೊಳ್ಳಲು ವಸತಿ, ದಾಸೋಹ, ಪ್ರಸಾದ, ತೀರ್ಥ ವ್ಯವಸ್ಥೆ ಇರುವುದಿಲ್ಲ. ಸಾರ್ವಜನಿಕರು ಕೋವಿಡ್ ನಿಮಗಳನ್ನು ಪಾಲಿಸಿ ಆಡಳಿತ ಮಂಡಳಿಯೊAದಿಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ಹುಲಿಗೆಮ್ಮ ದೇವಿ ದೇವಿಸ್ಥಾನ : ನ.05 ರಿಂದ ಸಾರ್ವಜನಿಕ ದರ್ಶನಕ್ಕೆ ಮುಕ್ತ
Please follow and like us: