fbpx

ಹೇಮರಡ್ಡಿ ಮಲ್ಲಮ್ಮ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ


ಕೊಪ್ಪಳ ಮೇ.  : ಶಿವಶರಣೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು (ಮೇ.10) ಹೇಮರಡ್ಡಿ ಮಲ್ಲಮ್ಮರವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಭಕ್ತಿ ನಮನ ಸಲ್ಲಿಸಲಾಯಿತು.
ಕೋವಿಡ್-19 ವೈರಾಣು ತಡೆಗಟ್ಟಲು ಲಾಕ್‌ಡೌನ್ ಆದೇಶ ಇರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಿವಶರಣೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಜಿಲ್ಲಾಧಿಕಾರಿ ಕಚೇರಿಯ ಮಹಾವೀರ, ಈರಣ್ಣ, ವಾರ್ತಾ ಇಲಾಖೆಯ ಎಂ.ಅವಿನಾಶ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದು ಹೇಮರಡ್ಡಿ ಮಲ್ಲಮ್ಮರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನ ಸಲ್ಲಿಸಿದರು

Please follow and like us:
error
error: Content is protected !!