2ನೇ ಹಂತದ ಗ್ರಾ.ಪಂ. ಚುನಾವಣೆ : 1551 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ


2ನೇ ಹಂತದ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಜಿಲ್ಲೆಯ 76 ಗ್ರಾಮ ಪಂಚಾಯಿತಿಗಳಲ್ಲಿ ಈವರೆಗೆ ಒಟ್ಟು 1551 ನಾಮಪತ್ರಗಳು ಸಲ್ಲಿಕೆಯಾಗಿವೆ.
ಎರಡನೇ ಹಂತದ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯ ಗಂಗಾವತಿ, ಕಾರಟಗಿ, ಕನಕಗಿರಿ ಹಾಗೂ ಕುಷ್ಟಗಿ ತಾಲ್ಲೂಕುಗಳ 76 ಗ್ರಾಮ ಪಂಚಾಯಿತಿಗಳಲ್ಲಿನ 1,375 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.  ಈ ಪೈಕಿ ಗಂಗಾವತಿ ತಾಲ್ಲೂಕಿನ 18 ಗ್ರಾಮ ಪಂಚಾಯಿತಿಗಳಲ್ಲಿನ 347 ಸ್ಥಾನಗಳಿಗೆ 399 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಕಾರಟಗಿ ತಾಲ್ಲೂಕಿನ 11 ಗ್ರಾಮ ಪಂಚಾಯಿತಿಗಳಲ್ಲಿನ 207 ಸ್ಥಾನಗಳಿಗೆ 226 ಅಭ್ಯರ್ಥಿಗಳು, ಕನಕಗಿರಿ ತಾಲ್ಲೂಕಿನ 11 ಗ್ರಾಮ ಪಂಚಾಯಿತಿಗಳಲ್ಲಿನ 196 ಸ್ಥಾನಗಳಿಗೆ 182 ಅಭ್ಯರ್ಥಿಗಳು, ಕುಷ್ಟಗಿ ತಾಲ್ಲೂಕಿನ 36 ಗ್ರಾಮ ಪಂಚಾಯಿತಿಗಳಲ್ಲಿನ 625 ಸ್ಥಾನಗಳಿಗೆ 744 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಈವರೆಗೆ ಒಟ್ಟು 1551 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ  ತಿಳಿಸಿದ್ದಾರೆ.

Please follow and like us:
error