2021ರ ಮತದಾರರ ಪಟ್ಟಿ ಪರಿಷ್ಕರಣೆ : ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ

ಕೊಪ್ಪಳ,  : 2021ರ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬAಧಿಸಿದAತೆ ಹಕ್ಕು ಮತ್ತು ಆಕ್ಷೇಪಣೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್. 17 ರವರೆಗೆ ಕಾಲವಕಾಶವನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ದಿನಾಂಕ: 01.01.2021ರ ಅರ್ಹತಾ ದಿನಾಂಕದ ಆಧಾರದ ಮೇಲೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯನ್ವಯ ಡಿಸೆಂಬರ್.17 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗೆ ಅರ್ಜಿ ಸಲ್ಲಿಸಲು ಕಾಲವಕಾಶವನ್ನು ನಿಗದಿಪಡಿಸಲಾಗಿದ್ದು, 2021ರ ಜನವರಿ. 18 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸಂಬAಧಿಸಿದAತೆ ಮಾಹಿತಿಯನ್ನು ಪಡೆಯಲು ಮತ್ತು ಮತದಾರರ ಪಟ್ಟಿಗೆ ಸಂಬAಧಿಸಿದ ದೂರುಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸ್ಥಾಪಿಸಲಾಗಿರುವ ಸಹಾಯವಾಣಿ ಸಂಖ್ಯೆ: 08539-225001ಕ್ಕೆ ಬೆಳಿಗ್ಗೆ 10 ರಿಂದ ಸಂಜೆ 05-30 ರೊಳಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಅಥವಾ ದೂರುಗಳನ್ನು ಸಲ್ಲಿಸಬಹುದಾಗಿದೆ 

Please follow and like us:
error