6 ವರ್ಷದೊಳಗಿನ ಮಕ್ಕಳ ಸರ್ವೇ ಮಾಡಿ, ಅಗತ್ಯ ಸೇವೆ ಒದಗಿಸಿ : ವಿಕಾಸ್ ಕಿಶೋರ್ ಸುರಳ್ಕರ್

ವಲಸೆ ಕುಟುಂಬಗಳ ಮಕ್ಕಳ ರಕ್ಷಣಾ ಸಭೆ

ಕೊಪ್ಪಳ  : ವಲಸೆ ಕುಟುಂಬಗಳ 6 ವರ್ಷದೊಳಗಿನ ಮಕ್ಕಳ ಸರ್ವೇ ಕಾರ್ಯವನ್ನು ಮಾಡಿ, ಅತಂಹ ಮಕ್ಕಳನ್ನು ಹತ್ತಿರದ ಅಂಗನವಾಡಿ ಕೇಂದ್ರಗಳಿಗೆ ದಾಖಲಾತಿ ಮಾಡಿಕೊಂಡು ಅಗತ್ಯ ಸೇವೆಯನ್ನು ಒದಗಿಸುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಲಸೆ ಕುಟುಂಬಗಳ ಮಕ್ಕಳ ರಕ್ಷಣೆ ಕುರಿತ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇರೆ ಜಿಲ್ಲೆ ಹಾಗೂ ರಾಜ್ಯದಿಂದ ಜಿಲ್ಲೆಗೆ ಆಗಮಿಸಿರುವ ಕುಟುಂಬಗಳಲ್ಲಿನ 6 ವರ್ಷದೊಳಗಿನ ಮಕ್ಕಳ ಸರ್ವೇ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಾಡುವುದು. ಅತಂಹ ಮಕ್ಕಳನ್ನು ಹತ್ತಿರದ ಅಂಗನವಾಡಿ ಕೇಂದ್ರಗಳಿಗೆ ದಾಖಲಾತಿ ಮಾಡಿಕೊಂಡು ಅಗತ್ಯ ಸೇವೆಯನ್ನು ನೀಡುವದರೊಂದಿಗೆ ವರದಿಯನ್ನು 15 ದಿನಗಳೊಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ವಲಸೆ ಕುಟುಂಬದ ಹಿತರಕ್ಷಣೆಗಾಗಿ, ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ, ಮಾನವ ಅನೈತಿಕ ಸಾಗಾಣಿಕೆ ತಡೆಗಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಚನೆಯಾಗಿ ಕಾರ್ಯನಿರ್ವಹಿಸುವ ಮಹಿಳೆಯರ ಮತ್ತು ಮಕ್ಕಳ ಕಾವಲು ರಕ್ಷಣಾ ಸಮಿತಿಗಳು ಸಕ್ರೀಯವಾಗಿ ಕಾರ್ಯನಿರ್ವಹಿಸುವುದು. ಹಾಗೂ ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ವಲಸೆ ಕುಟುಂಬಗಳ, ಮಹಿಳೆಯರ ಮತ್ತು ಮಕ್ಕಳ ಮಾಹಿತಿಯನ್ನು ಸಂಗ್ರಹಿಸಿ ಇಟ್ಟುಕೊಳ್ಳವುದು.  ಇತಂಹ ಕುಟುಂಬಗಳ ಮೇಲೆ ಯಾವುದೇ ರೀತಿಯ ಹಿಂಸೆ, ದೌರ್ಜನ್ಯ ಮತ್ತು ಕಿರುಕುಳಗಳು ಸಂಭವಿಸದAತೆ ಸೂಕ್ತ ಕ್ರಮ ಕೈಗೊಳ್ಳುವದರೊಂದಿಗೆ  ಸಂವೇದನಾಶೀಲರಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡ ಸರ್ವೇ ಹಾಗೂ ಮಾಹಿತಿಯು ಒಂದು ವರ್ಷದ ಹಿಂದಿನದ್ದಾಗಿರುವುರಿAದ, 15 ದಿನದೊಳಗಾಗಿ ಇಲಾಖೆಯು ಮರು ಸರ್ವೇಯನ್ನು ಮಾಡುವುದು ಮತ್ತು ಬೇರೆ-ಬೇರೆ ಜಿಲ್ಲೆ ಹಾಗೂ ರಾಜ್ಯದಿಂದಲೂ ಜಿಲ್ಲೆಗೆ ಆಗಮಿಸಿರುವ ಕುಟುಂಬಗಳ ಮಕ್ಕಳ ಸರ್ವೇಯನ್ನು ಸಹ ಮಾಡಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಕರು ದೊಡ್ಡಬಸಪ್ಪ ನೀರಲಕೆರೆ ಮಾತನಾಡಿ, ಜಿಲ್ಲೆಯಲ್ಲಿ ವಲಸೆ ಕುಟುಂಬಗಳ ಮಕ್ಕಳ ಸರ್ವೇ ಕಾರ್ಯವನ್ನು 2020ರ ಫೆಬ್ರುವರಿಯಲ್ಲಿ ಮಾಡಲಾಗಿದ್ದು, ಈ ಮಕ್ಕಳ ಹಾಗೆಯೇ ಋತುಮಾನಾಧಾರಿತ ಸೇತುಬಂಧ ಶಾಲೆಗಳನ್ನು ಆರಂಭಿಸಲು ಈಗಾಗಲೇ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಯುನೆಸ್ಸೆಪ್‌ನ ಹರೀಶಜ್ಯೋಗಿ ಸೇರಿದಂತೆ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪನಾಧಿಕಾರಿಗಳು ಹಾಗೂ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಭಾಗವಹಿಸಿದ್ದರು.

Please follow and like us:
error