
ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಕಾರ್ಯಕ್ರಮದ ಧ್ವಜಾರೋಹಣವನ್ನು ನೆರವೇರಿಸುವರು.
ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ.ರಾಜಶೇಖರ್ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್. ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಬಸವರಾಜ ಪಾಟೀಲ್ ಇಟಗಿ ಹಾಗೂ ಡಾ. ಚಂದ್ರಶೇಖರ್ ಬಿ.ಪಾಟೀಲ್, ಮುನಿರಾಬಾದ್ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿ.ಹೆಚ್.ಎಮ್., ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ಭೀಮಣ್ಣ ತಳ್ಳಿಕೇರಿ, ಜಿ.ಪಂ. ಉಪಾಧ್ಯಕ್ಷೆ ಬೀನಾ ಗೌಸ್, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮೀ ವಿ.ಮಹೇಶ ಭಾಗವಹಿಸುವರು. ಧ್ವಜಾರೋಹಣ ನಂತರ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ. ಸೇವಾದಳ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಗೃಹ ರಕ್ಷಕದಳದಿಂದ ಪಥಸಂಚಲನ, ಗೌರವ ರಕ್ಷೆ ಸ್ವೀಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಲಿವೆ .
Please follow and like us: