ಭೂ ಸುಧಾರಣೆ, ರೈತ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

Kannadanet NEWS ಅಖಿಲ ಭಾರತ ರೈತ ಸಂಘರ್ಷ ಸಮಿತಿಯ ಕರೆಯ ಮೇರೆಗೆ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ, ಕರ್ನಾಟಕ ರೈತ ಪ್ರಾಂತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಭೂ ಸುಧಾರಣೆ, ರೈತ, ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತೆಡೆದು ಪ್ರತಿಭಟನೆ ಜರುಗಿತು.

ರೈತ ಕಾರ್ಮಿಕ ವರ್ಗದ ಹೋರಾಟ ಸಂಘಟನೆಗಳ ಸದಸ್ಯರನ್ನು ಚರ್ಚೆಗೆ ಕರೆಯದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೃಷಿ ಸಂಬಂಧಿತ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲಾಗಿದೆ. ಇದರಿಂದ ರೈತ, ಕಾರ್ಮಿಕ ಸಮುದಾಯಕ್ಕೆ ಮೋಸ ಮಾಡಲಾಗಿದೆ. ಈ ಕಾಯ್ದೆಗಳನ್ನು ಕೈಬಿಡಬೇಕು. ರೈತರ ಬೆಳೆಗೆ ಬೆಂಬಲ ಬೆಲೆ ನೀಡಬೇಕು, ಇದರಿಂದ ಕಾರ್ಮಿಕವರ್ಗ ಸಹ ಬದುಕುತ್ತದೆ. ಆದ್ರೆ ಮೋದಿ ಸರ್ಕಾರ ರೈತ ವಿರೋಧಿ ಸರ್ಕಾರದಂತೆ ವರ್ತಿಸುತ್ತಿದೆ ಅಂತಾ ರೈತರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಸುಮಾರು ಒಂದುಗಂಟೆಗಳ ಕಾಲ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಸ್ಥಳಕ್ಕೆ ಎಸ್ಪಿ ಟಿ ಶ್ರೀಧರ್ ಭೇಟಿ ನೀಡಿದರು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

Please follow and like us:
error