ರಾಜ್ಯ ಬಜೆಟ್ ನಲ್ಲಿ  ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಎಸ್ಎಫ್ಐ ಮನವಿ

            Koppal  ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮಾರ್ಚ್ -05 ರಂದು ಮಂಡನೆಯಾಗಲಿರುವ  ರಾಜ್ಯ ಬಜೆಟ್ ನಲ್ಲಿ ಈ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ಎಫ್ಐ ರಾಜ್ಯದಾದ್ಯಂತ  ಶಾಸಕರು /ಸಚಿವರುಗಳ ಕಛೇರಿ ಎದುರು ಪ್ರತಿಭಟನಾ ಧರಣಿಗಳನ್ನು ನಡೆಸಿ ಈ ಕೆಳಗಿನ ಹಕ್ಕೊತ್ತಾಯಗಳ ಈಡೇರಿಸಲು ಆಗ್ರಹಿಸಿ ಎಸ್ ಎಫ್ ಐ ಸಂಘಟನೆ ಪ್ರತಿಭಟನೆ ನಡೆಸಿದರು

2019-20 ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡಬೇಕು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗಳಲ್ಲಿ ಮೊದಲ ವರ್ಷದ ಪದವಿಗೆ ದಾಖಲಾತಿ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುವ ವಿದ್ಯಾರ್ಥಿ ಸ್ನೇಹಿ ಯೋಜನೆಯನ್ನು ಮಾನ್ಯ ಸಿದ್ದರಾಮಯ್ಯ ರವರು ಮುಖ್ಯಮಂತ್ರಿಯಾಗಿದ್ದಾಗ 2016-17 ಶೈಕ್ಷಣಿಕ ವರ್ಷದಲ್ಲಿ ಜಾರಿಗೆ ತಂದರು. ಇದು ಒಂದು ವರ್ಷ ಮಾತ್ರ ಜಾರಿಯಾಯಿತು ಆದರೆ ನಂತರ 2017-18 ಮತ್ತು 2018-19 ಶೈಕ್ಷಣಿಕ ವರ್ಷದಲ್ಲಿ ಮೊದಲ ವರ್ಷದ ಪದವಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ರಾಜ್ಯ ಸರ್ಕಾರ ನೀಡಿಲ್ಲ. ಇದೀಗ ಮತ್ತೆ 2019-20 ಸಾಲಿನ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಈ ಉಚಿತ ಲ್ಯಾಪ್ಟಾಪ್ ಯೋಜನೆಯಿಂದ ವಂಚನೆಯಾಗಿರುವ ದ್ವೀತಿಯ ಮತ್ತು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನ್ನು ಯಾವುದೇ ಷರತ್ತು ಹಾಕದೇ ಈ ಬಜೆಟ್ ನಲ್ಲಿ ಘೋಷಿಸಬೇಕು.

ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು : ಕೇರಳ, ತಮಿಳುನಾಡು ಮಾದರಿಯಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು ಎಂದು ಕಳೆದ 3 ವರ್ಷಗಳಿಂದ ರಾಜ್ಯದ ವಿದ್ಯಾರ್ಥಿಗಳು ಹಲವು ಹಂತಗಳಲ್ಲಿ ಹೋರಾಟ ನಡೆಸಿದ್ದರು ರಾಜ್ಯ ಸರ್ಕಾರ ಉಚಿತ ಬಸ್ ಪಾಸ್ ನೀಡುವ ಬದಲು ಕೆಎಸ್ಸಾರ್ಟಿಸಿ ಬಸ್ ಟಿಕೆಟ್ ದರವನ್ನು 12% ಹೆಚ್ಚಳ ಮಾಡಿರೋದು ಖಂಡನೀಯ. ಈ ಕೂಡಲೇ ರಾಜ್ಯ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಮೂಲಕ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು.

ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆ ಯನ್ನು ಕನಿಷ್ಠ 3500/ರೂ ಗಳಿಗೆ ಹೆಚ್ಚಿಸಬೇಕು : ರಾಜ್ಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪ್ರತಿದಿನದ ಮೂರೊತ್ತಿನ ಊಟಕ್ಕೆ ಕೇವಲ 50/ರೂ ಗಳಂತೆ ತಿಂಗಳಿಗೆ 1500/ರೂಗಳನ್ನು ಮಾತ್ರ ನೀಡಲಾಗುತ್ತಿದೆ. ಎಲ್ಲ ಆಹಾರ ಪದಾರ್ಥಗಳು, ಗ್ಯಾಸ್, ಬೆಲೆ ಏರಿಕೆ ಆಗಿದೆ. ಆದರೂ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಸರ್ಕಾರ ಹೆಚ್ಚಿಸಿಲ್ಲ. ಇದರಿಂದ ರಾಜ್ಯದ ವಿದ್ಯಾರ್ಥಿಗಳು ಪೌಷ್ಠಿಕ ಆಹಾರದಿಂದ ವಂಚಿತರಾಗುತ್ತಿದ್ದಾರೆ. ಜೈಲಿನಲ್ಲಿರುವ ಕೈದಿಗಳಿಗಳ ಆಹಾರಕ್ಕೆ ಪ್ರತಿದಿನ ನೂರಾರು ರೂಪಾಯಿ ಖರ್ಚು ಮಾಡುವ ಸರ್ಕಾರ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಕನಿಷ್ಠ ಮಾಸಿಕ 3500/ರೂಗಳಿಗೆ ಹೆಚ್ಚಿಸಬೇಕು. ಹಾಗೂ ಕಳೆದ ಎರಡು ವರ್ಷಗಳ ಹಿಂದೆ ಅಂದು ವಿರೋಧ ಪಕ್ಷವಾಗಿದ್ದಾಗ ಬಿಜೆಪಿ ಪಕ್ಷವೇ ರಾಜ್ಯಾದ್ಯಂತ ನಡೆಸಿದ ಹಾಸ್ಟೆಲ್ ಗಳ ಸಮೀಕ್ಷೆ ವರದಿಯನ್ನು ಜಾರಿಗೊಳಿಸಬೇಕು. ಬಹುತೇಕ  ಹಾಸ್ಟೆಲ್ ಗಳು ಖಾಸಗಿ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದು ಇಲ್ಲಿ ಕನಿಷ್ಠ ಮೂಲ ಸೌಕರ್ಯಗಳನ್ನು ಒದಗಿಸಲು ಬಜೆಟ್ ನಲ್ಲಿ ಹಣ ಮೀಸಲಿಡಬೇಕು.

ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು :     ರಾಜ್ಯದಲ್ಲಿ  ಶಿಕ್ಷಣದ ಶುಲ್ಕ ಕಟ್ಟಲು ಶೈಕ್ಷಣಿಕ ಸಾಲ ಮಾಡಿಕೊಂಡಿರುವ ಎಲ್ಲ ವರ್ಗದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು. ಕೇರಳ ರಾಜ್ಯ ಸರ್ಕಾರ ಬಜೆಟ್ ನಲ್ಲಿ 900 ಕೋಟಿ ಶೈಕ್ಷಣಿಕ ಸಾಲ ಮನ್ನಾ ಮಾಡಿದೆ. ಇದೆ ಮಾದರಿಯಲ್ಲಿ ರಾಜ್ಯ ಸರ್ಕಾರ ಮಾಡಬೇಕು.

ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 30%  ಹಣ ಮೀಸಲಿಡಬೇಕು : ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಶಿಕ್ಷಣತಜ್ಞ ಕೊಥಾರಿ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಕನಿಷ್ಠ 30% ಹಣ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು ಎಂದು ಹಲವು ವರ್ಷಗಳಿಂದ ಹೋರಾಟ ಮುಂದುವರಿಯುತ್ತಿದ್ದರು ಶಿಕ್ಷಣ ಕ್ಷೇತ್ರಕ್ಕೆ ಪ್ರತಿ ಬಜೆಟ್ ನಲ್ಲಿ ಹಣ ಕಡಿತ ಮಾಡಿ  ಸರಾಸರಿ ಕೇವಲ 11% ಹಣ ನೀಡುತ್ತಿರುವುದು ಖಂಡನೀಯ. ಇಡೀ ದೇಶದಲ್ಲಿ ಉತ್ತಮ ಗುಣಮಟ್ಟದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಹೊಂದಿರುವ ಕೇರಳ ರಾಜ್ಯ 27% ಹಣ ನೀಡುತ್ತಿರುವುದು ಶ್ಲಾಘನೀಯ. ಸರ್ಕಾರಿ ಶಾಲಾ ಕಾಲೇಜು ಹಾಸ್ಟೆಲ್, ವಿಶ್ವ ವಿದ್ಯಾಲಗಳ ಸಮಗ್ರ ಅಭಿವೃದ್ಧಿಗಾಗಿ ಕನಿಷ್ಠ 30% ಹಣವನ್ನು ಈ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು.

ಈ ಎಲ್ಲ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ಎಫ್ಐ ಮಾರ್ಚ್-03-2020 ರಂದು ರಾಜ್ಯಾದ್ಯಂತ ಶಾಸಕರು ಸಚಿವರ ಕಛೇರಿ ಎದುರು ಪ್ರತಿಭಟನಾ ಧರಣಿಗಳನ್ನು ನಡೆಸಿ ಮನವಿ ಸಲ್ಲಿಸಲಾಗುತ್ತಿದೆ. ಈ ಬೇಡಿಕೆಗಳ ಈಡೇರಿಕೆಗಾಗಿ ಎಲ್ಲ ಶಾಸಕರು ವಿಧಾನ ಸಭಾ ಬಜೆಟ್ ಅಧಿವೇಶನದಲ್ಲಿ ಧ್ವನಿ ಎತ್ತಬೇಕೆಂದೂ ಒತ್ತಾಯಿಸುತ್ತೇವೆ. ಇಲ್ಲದಿದ್ದರೆ ರಾಜ್ಯಾದ್ಯಂತ ವಿದ್ಯಾರ್ಥಿಗಳ ಹೋರಾಟವನ್ನು ತೀವ್ರಗೊಳಿಸಲಾಗುವುದು.ನಗರದ ಸರ್ಕಾರಿ ಮಹಿಳಾ ಪದವಿ ಕಾಲೇಜಿಯಿಂದ ಪ್ರತಿಭಟನೆ ಮೆರವಣಿಗೆ ಪ್ರಾರಂಭವಾಗಿ ಪಬ್ಲಿಕ್ ಗ್ರೌಂಡ್ ಮುಖಾಂತರ ತಹಶೀಲ್ದಾರ ಕಛೇರಿಯ ಮುಂದೆ ಪ್ರತಿಭಟನೆ ಮಾಡಿ  ರಾಘವೇಂದ್ರ ಹಿಟ್ನಾಳ ಶಾಸಕರು ವಿಧನಾ ಸಭಾ ಕ್ಷೇತ್ರ ಕೊಪ್ಪಳರವರ ಆಪ್ತ ಸಹಾಯಕ ಮತ್ತು ತಹಶೀಲ್ದಾರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಅಮರೇಶ ಕಡಗದ                      ಸುಭಾನ್ ಸೈಯದ              ಶಿದ್ದಪ್ಪ ಎಮ್              ಯಮನೂರ ಹೆಚ್.           ಶಿವುಕುಮಾರ ಸಿ

ಎಸ್ಎಫ್ಐ ರಾಜ್ಯಾಧ್ಯಕ್ಷರು           ಎಸ್ಎಫ್ಐ ಜಿಲ್ಲಾ ಅಧ್ಯಕ್ಷ.           ಜಿಲ್ಲಾ ಕಾರ್ಯದರ್ಶಿ                                ಜಿಲ್ಲಾ ಸಮಿತಿ ಸದಸ್ಯರು

ಬಸವರಾಜ ಹೆಚ್. ಸಿ., ರೇವಪ್ಪ ಎಮ್.ಡಿ., ಶಾರದಾ ಬೇಗಂ, ಜ್ಯೋತಿ, ಹುಲಿಗೆಮ್ಮ, ಗಾಯತ್ರಿ ಎಮ್. ಅನಿತಾ, ಪರವೀನ, ಶಿವರಾಜ, ದೇವಾ, ಅನಿಲಕುಮಾರ, ಬಸವರಾಜ ಹೆಚ್, ಮಹೇಶ ಎ.ಬಿ., ಗಾಯಿತ್ರಿ ಇತರರು ಇದ್ದರು.

Please follow and like us:
error