You are here
Home > Koppal News > ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಕಾರ್ಯಗಾರ

ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಕಾರ್ಯಗಾರ

​ 

ಕೊಪ್ಪಳ:  ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶ ವಿಶ್ಲೇಷಣೆ ಕುರಿತಂತೆ ಕೊಪ್ಪಳ ಜಿಲ್ಲಾ ಮಟ್ಟದ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಕಾರ್ಯಗಾರ ಫೆ.18 ರಂದು ಬೆಳಿಗ್ಗೆ 10 ಗಂಟೆಗೆ ಕುಷ್ಟಗಿಯ ವಿಜಯ ಚಂದ್ರಶೇಖರ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದೆ. ಕೊಪ್ಪಳ ಜಿಲ್ಲೆಯ ಸರಕಾರಿ ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಕಾರ್ಯಗಾರವನ್ನು  ಜಿಲ್ಲೆಯ ಕುಷ್ಟಗಿಯ ವಿಜಯ ಚಂದ್ರಶೇಖರ ಪ್ರೌಢಶಾಲೆಯಲ್ಲಿ  ಹಮ್ಮಿಕೊಳ್ಳಲಾಗಿದೆ.   ಈ ಸಂದರ್ಭಧಲ್ಲಿ  ಶಾಲಾವಾರು ಹತ್ತನೇ ತರಗತಿಯ ಮೊದಲನೇ ಪೂರ್ವ ಸಿದ್ಧತಾ ಪರಿಕ್ಷೆಯ ಫಲಿತಾಂಶ ವಿಶ್ಲೇಷಣೆ ಮಾಡಲಾಗುವುದು.  ಈ ಕಾರ್ಯಗಾರದಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಅನುದಾನಿತ ಹಾಗೂ ಅನುದಾನರಹಿತ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರು ಮೊದಲನೇ ಪೂರ್ವ ಸಿದ್ಧತಾ ಪರಿಕ್ಷೆಯ ಫಲಿತಾಂಶ ವಿಶ್ಲೇಷಣೆ ಹಾಗೂ ಲಿಖಿತ ಪರಿಕ್ಷೆಯಲ್ಲಿ   ಶೇಕಡಾ 35 ಕ್ಕಿಂತ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳ ಪಟ್ಟಿ ಹಾಗೂ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆ ಮಾಡಲು ಕೈಗೊಂಡಿರುವ ಕ್ರಮಗಳ ದಾಖಲೆಗಳೊಂದಿಗೆ, ಕಡ್ಡಾಯವಾಗಿ ಹಾಜರಾಗಬೇಕು.

ಕಾರ್ಯಗಾರಕ್ಕೆ ಮುಖ್ಯೋಪಾಧ್ಯಾಯರು ಖುದ್ದಾಗಿ ಮತ್ತು ಕಡ್ಡಾಯವಾಗಿ ಹಾಜರಾಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Top