ಫೆಬ್ರುವರಿ. ೦೬ ಮತ್ತು ೦೭ ರಂದು ಕೊಪ್ಪಳದಲ್ಲಿ ಮಿನಿ ಉದ್ಯೋಗ ಮೇಳ : ಪಿ. ಸುನೀಲ್ ಕುಮಾರ್


ಕೊಪ್ಪಳ ಜ.  :   ”ಮಿನಿ ಉದ್ಯೋಗ ಮೇಳ-೨೦೧೯” ಅನ್ನು ಫೆಬ್ರುವರಿ. ೦೬ ಮತ್ತು ೦೭ ರಂದು ಕೊಪ್ಪಳ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.
ಮಿನಿ ಉದ್ಯೋಗ ಮೇಳವನ್ನು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದು, ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗಕ್ಕಾಗಿ ಇದೊಂದು ಸುವರ್ಣ ಅವಕಾಶವಾಗಿದೆ. ಈ ಉದ್ಯೋಗ ಮೇಳಕ್ಕೆ ಆಸಕ್ತಿವುಳ್ಳ ಉದ್ಯೋಗಾಕಾಂಕ್ಷಿಗಳು ವೆಬ್‌ಸೈಟ್ https://koppal.nic.in/ನಲ್ಲಿ ನೀಡಿರುವ ಅರ್ಜಿ ನಮೂನೆಯಲ್ಲಿ ತಮ್ಮ ಸ್ವ-ವಿವರಗಳ ಮಾಹಿತಿಯನ್ನು ಭರ್ತಿ ಮಾಡಬೇಕು. ಹೆಚ್ಚಿನ ವಿವರಗಳಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಕಛೇರಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಮೊಬೈಲ್ ಸಂಖ್ಯೆ ೮೧೦೫೮೪೮೯೯೧ ಮತ್ತು ದೂ.ಸಂ. ೦೮೫೩೯-೨೨೦೮೫೯ ಕ್ಕೆ ಸಂಪರ್ಕಿಸಬಹುದಾಗಿದೆ. ಈ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Please follow and like us:
error