ಬಂದ್ ಗೆ ನೀರಸ ಪ್ರತಿಕ್ರಿಯೆ

ಬಿಜೆಪಿ ಕರೆ ನೀಡಿರುವ ಕರ್ನಾಟಕ ಬಂದ್ಗೆ ಕೊಪ್ಪಳ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಗಿನಿಂದಲೇ ಎಲ್ಲಾ ಅಂಗಡಿ ಮುಂಗಟ್ಟುಗಳು , ಶಾಲಾ ಕಾಲೇಜುಗಳು ತೆರೆದಿದ್ದವು , ವಾಹನ ಮತ್ತು ಜನಸಂಚಾರ ಸಹ ಎಂದಿನಂತಿತ್ತು. ಸಂಸದ ಕರಡಿ ಸಂಗಣ್ಣ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ, ಪರಿವಾನಿಗೆ ಇಲ್ಲದೆ ಆಟೋವನ್ನು ಪೊಲೀಸರು ವಶಪಡಿಸಿಕೊಂಡ್ರು. ಇದರಿಂದ ಆಕ್ರೋಶಗೊಂಡ ಸಂಸದ ಕರಡಿ ಸಂಗಣ್ಣ, ಬಿಜೆಪಿ ಕಾರ್ಯಕರ್ತರು ನಗರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ರು.

ಇದ್ರಿಂದಾಗಿ ಕೆಲಕಾಲ ಠಾಣೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೊಪ್ಪಳದಲ್ಲಿ ಬಿಜೆಪಿ ಹಾಗೂ ಪೊಲೀಸರ ನಡುವೆ ಗಲಾಟೆ ಹೊರೆತುಪಡೆಸಿದ್ರೆ, ಜಿಲ್ಲೆಯಲ್ಲಿ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿಯೂ ಸಹ ಎಂದಿನಂತೆ ಸಾರಿಗೆ ಬಸ್ಗಳು ಸೇರಿದಂತೆ ಖಾಸಗಿ ವಾಹನಗಳು ರಸ್ತೆಗಿಳಿದಿದ್ದು, ಜನಜೀವನ ಎಂದಿನಂತೆ ಸುಗಮಗೊಂಡಿತ್ತು. ಜಿಲ್ಲೆಯ ಕೊಪ್ಪಳ, ಗಂಗಾವತಿ, ಕಾರಟಗಿ, ಕುಷ್ಟಗಿ, ಯಲಬುರ್ಗಾ ತಾಲೂಕುಗಳಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ವು.. ಇದೇ ವೆಳೆ ಮಾತನಾಡಿನ ಸಂಸದ ಕರಡಿ ಸಂಗಣ್ಣ ಪೊಲೀಸರು ಸರ್ಕಾರದ ಚೇಲಾಗಳಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.