ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ : ಗವಿಮಠದ ಆವರಣದಲ್ಲಿ ಕಾರ್ಯಕ್ರಮ

 ಗಾಂಧಿಜಿ ಕಂಡ ಕನಸಾದ ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಮಾಡುವದಕ್ಕೆ ಕೊಪ್ಪಳ ಜಿಲ್ಲಾಡಳಿತ, 

ಜಿಲ್ಲಾಪಂಚಾಯತ್ ಸಜ್ಜಾಗಿದೆ. ಅಕ್ಟೋಬರ್ 2 ರ ಒಳಗೆ ಕೊಪ್ಪಳ ಜಿಲ್ಲೆಯನ್ನು ಸಂಪೂರ್ಣವಾಗಿ ಬಯಲು  ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸುವ ಹಿನ್ನಲೆಯಲ್ಲಿ ಇಂದು ಕೊಪ್ಪಳದ ಗವಿಮಠದ ಆವರಣದಲ್ಲಿ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿದಿ ಬೋಧಿಸಿದರು. ಈ ಮೂಲಕ ಪ್ಲಾಸ್ಟೀಕ್ ಅನ್ನು ಸಂಪೂರ್ಣವಾಗಿ ನಿಷೇಧ ಮಾಡಬೇಕು ಅಷ್ಟೇ ಅಲ್ಲದೇ ಪ್ರತಿಯೋಂದು ಮನೆಯವರು ಶೌಚಾಲಯವನ್ನು ಕಟ್ಟಿಸಿಕೋಳ್ಳಬೇಕು ಎಂದು ತಿಳಿ ಹೇಳಿದರು. ಅಗಷ್ಟ 09 ರಿಂದ 15 ರವರೆಗೆ ಬಯಲು ಬಹಿರ್ದೆಸೆ ಮುಕ್ತ ಸ್ವಾತಂತ್ರ್ಯ ಸಪ್ತಾಹವನ್ನು ವೈವಿಧ್ಯಮಯ ಜಾಗೃತಿ ಕಾರ್ಯಕ್ರಮಗಳ ಮೂಲಕ ಕೊಪ್ಪಳ ಜಿಲ್ಲೆಯಲ್ಲಿ ಆಚರಿಸಲಾಗುತ್ತಿದೆ, ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಆಚರಿಸುವ ಮೂಲಕ ಗ್ರಾಮೀಣ ಸಮುದಾಯದಲ್ಲಿ ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸುವಂತೆ ಹಾಗೂ ಪ್ರತಿಯೊಂದು ಗ್ರಾಮವನ್ನು ಬಯಲು ಬಹಿರ್ದೆಸೆ ಮುಕ್ತ ಮಾಡಲು ವಿಶೇಷ ನೈರ್ಮಲ್ಯ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದರ ಹಿನ್ನಲೆಯಲ್ಲಿ ಇಂದು ಜಿಲ್ಲೆಯ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ಸುಮಾರು 10 ಸಾವಿರಕ್ಕೂ ಅಧಿಕ ಜನ ಮಾನವ ಸರಪಳಿ ನಿರ್ಮಿಸಿ ಪ್ರತಿಜ್ಞಾ ವಿಧಿ ಬೋಧಿಸುವ ಮೂಲಕ ಸಾರ್ವಜನಿಕರಿಗೆ ಸ್ವಚ್ಛತೆ ಹಾಗೂ ವಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಿದರು…

Please follow and like us:
error