ಬಸವ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ


ಕೊಪ್ಪಳ : ಬಸವ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು (ಏ.26) ಬಸವೇಶ್ವರರವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಭಕ್ತಿ ನಮನ ಸಲ್ಲಿಸಲಾಯಿತು.
ಕೋವಿಡ್-19 ವೈರಾಣು ತಡೆಗಟ್ಟಲು ಮೇ. 03 ರವರೆಗೆ ಲಾಕ್‌ಡೌನ್ ಆದೇಶ ಇರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಜಿಲ್ಲಾಧಿಕಾರಿ ಆಪ್ತ ಸಹಾಯಕರಾದ ಜಯಲಕ್ಷಿö್ಮÃ, ಜಿಲ್ಲಾಧಿಕಾರಿ ಕಚೇರಿಯ ಜಗದೀಶ, ಮಹಾವೀರ, ಈರಣ್ಣ, ವಾರ್ತಾ ಇಲಾಖೆಯ ಎಂ.ಅವಿನಾಶ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನ ಸಲ್ಲಿಸಿದರು

Please follow and like us:
error