ಬಾಲ್ಯ ವಿವಾಹ ನಿಷೇಧ ಹಾಗೂ ತಿದ್ದುಪಡಿ ಕಾಯ್ದೆ ಮತ್ತು ಲೈಂಗಿಕ ಅಪರಾದಗಳಿಂದ ಮಕ್ಕಳ ಸಂರಕ್ಷಣೆ

ಅ. ೦೭ ರಂದು ಕೊಪ್ಪಳದಲ್ಲಿ ಒಂದು ದಿನದ ಕಾರ್ಯಾಗಾರ
ಕೊಪ್ಪಳ ಅ. : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ “ಬಾಲ್ಯ ವಿವಾಹ ನಿಷೇಧ ಕಾಯ್ದೆ-೨೦೦೬ ಹಾಗೂ ಕರ್ನಾಟಕ ತಿದ್ದುಪಡಿ ಕಾಯ್ದೆ-೨೦೧೬” ಮತ್ತು “ಲೈಂಗಿಕ ಅಪರಾದಗಳಿಂದ ಮಕ್ಕಳ ಸಂರಕ್ಷಣೆ ಕಾಯ್ದೆ-೨೦೧೨” ರ ಕುರಿತು ಜಿಲ್ಲೆಯ ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕರು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಅ. ೦೭ ರಂದು ಬೆಳಿಗ್ಗೆ ೧೦ ಗಂಟೆಗೆ ಜಿ.ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವ್ಹಿ. ಕುಲಕರ್ಣಿ ಅವರು ಕಾರ್ಯಾಗಾರದ ಉದ್ಘಾಟನೆ ನೆರವೇರಿಸುವರು. ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಈರಣ್ಣ ಪಂಚಾಳ, ನಿವೃತ್ತ ಜಿಲ್ಲಾ ನ್ಯಾಯಾಧೀಶರು ಎಸ್.ಹೆಚ್. ಮಿಟ್ಟಲ್‌ಕೋಡ, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸದಸ್ಯ ಕಲ್ಲಪ್ಪ ತಳವಾರ ಪಾಲ್ಗೊಳ್ಳುವರು.
ಕಾರ್ಯಾಗಾರದ ಅಂಗವಾಗಿ ನಡೆಯಲಿರುವ ಮೊದಲನೇ ಅಧಿವೇಶನದಲ್ಲಿ ಬೆಳಿಗ್ಗೆ ೧೦-೩೦ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ಸಂಪನ್ಮೂಲ ವ್ಯಕ್ತಿಗಳಾದ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಎಸ್.ಹೆಚ್. ಮಿಟ್ಟಲ್‌ಕೋಡ ಅವರಿಂದ “ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಾ ಕಾಯ್ದೆ-೨೦೧೨” ರ ಕುರಿತು ಹಾಗೂ ಮಧ್ಯಾಹ್ನ ೧೨-೩೦ ರಿಂದ ೨ ಗಂಟೆಯವರೆಗೆ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸದಸ್ಯ ಕಲ್ಲಪ್ಪ ತಳವಾರ ಅವರಿಂದ “ಬಾಲ್ಯ ವಿವಾಹ ನಿಷೇಧ ಕಾಯ್ದೆ-೨೦೦೬ ಹಾಗೂ ಕರ್ನಾಟಕ ತಿದ್ದುಪಡಿ ಕಾಯ್ದೆ-೨೦೧೬” ರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಎರಡನೇ ಅಧಿವೇಶನದಲ್ಲಿ ಮಧ್ಯಾಹ್ನ ೩ ಗಂಟೆಯಿಂದ ೪ ಗಂಟೆಯವರೆಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಟಿ. ಶ್ರೀನಿವಾಸ ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ. ನಂತರ ಮಧ್ಯಾಹ್ನ ೪ ರಿಂದ ೫ ಗಂಟೆಯವರೆಗೆ ಶಿಭಿರಾರ್ಥಿಗಳೊಂದಿಗೆ ಸಂವಾದ ಮತ್ತು ಸಮಾರೋಪ ನಡೆಯಲಿದೆ .

Please follow and like us:
error